ಪ್ರಧಾನಿ ಮೋದಿ ಅವರ ಬಾಯಿ ಬಡಾಯಿ, ಸಾಧನೆ ಶೂನ್ಯ: ಸಿ ಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಚುನಾವಣೆ ಹತ್ತಿರವಾದಂತೆ ರಾಜಕೀಯ ಕಾವೇರಿದೆ. ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಸಿ ಎಂ , ರಾಜ್ಯ ಸರ್ಕಾರದ ಸಾಧನೆ ಜೊತೆಗೆ ಕೇಂದ್ರ ಸರಕಾರದ ವವೈಫಲ್ಯಮನವರಿಕೆ ಮಾಡಿಕೊಡಿ ಎಂದು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರ ಬಾಯಿ ಬಡಾಯಿ, ಸಾಧನೆ ಶೂನ್ಯ. ಆದರೂ ಬಿಜೆಪಿಯವರು ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ನಾವು ಸುಳ್ಳು ಹೇಳುವ ಅಗತ್ಯ ಇಲ್ಲ. ಸರಕಾರದ ಸಾಧನೆಗಳನ್ನು ತಿಳಿಸಿದರೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮನೆ ಮನೆಗೆ ಕಾಂಗ್ರೆಸ್ ಬಗ್ಗೆ ಶಾಶಕರು ಹೆಚ್ಚಾಗಿ ಆಸಕ್ತಿವಹಿಸಬೇಕು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲು ಪೂರಕ ವಾತಾವರಣ ಇದೆ. ಅದನ್ನು ಎಲ್ಲರೂ ಸೇರಿ ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದರು. ಎಲ್ಲ ವಿಧಾನಸಭೆ ಕ್ಷೇತ್ರದಲ್ಲಿ ಬೂತ್ ಸಮಿತಿ ರಚನೆ, ಬೂತ್ ಏಜೆಂಟರ ನೇಮಕ ಪ್ರಕ್ರಿಯೆ ಆರಂಭವಾಗಿದೆ. ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು, ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲು ಹಲವು ಕ್ರಮ ಕೈಗೊಳ್ಳಲಾಗಿದೆ ಎಂದರು.ಕಾರ್ಯಕರ್ತರು ಮನೆ ಮನೆಗೆ ಹೋಗಿ ಸಾಧನೆ ವಿವರಿಸಿದರೆ “ಮನೆ ಮನೆಗೆ ಕಾಂಗ್ರೆಸ್ಕಾ” ರ್ಯಕ್ರಮ ಯಶಸ್ವಿ ಆಗುತ್ತದೆ. ಶಾಸಕರೂ ಇದರಲ್ಲಿ ತೊಡಗಿಸಿಕೊಳ್ಳಬೇಕು.

ಶಾಸಕಾಂಗ ಸಭೆಗೆ ನಾನು ಇದುವರೆಗೂ ಬಂದಿಲ್ಲ ಎಂದು ವೇಣುಗೋಪಾಲ್ ಅವರು ಹೇಳಿದ್ದರು. ಅದಕ್ಕಾಗಿ ಈ ವಿಶೇಷ ಸಭೆ ಕರೆಯಲಾಗಿದೆ ಎಂದರು.

ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಎಸ್.ಆರ್.ಪಾಟೀಲ್ ಉಪಸ್ಥಿತರಿದ್ದರು.

Leave a Reply