2017ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು, ಅಕ್ಟೋಬರ್ 30 : 2017ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ಪ್ರಸಿದ್ಧ ಗಾಯಕ ಕೆ.ಜೆ.ಯೇಸುದಾಸ್ ಸೇರಿದಂತೆ 62 ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರು ಸೋಮವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡಿದರು. ನವೆಂಬರ್ 1ರಂದು ಸಂಜೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಗಾಯಕ ಕೆ.ಜೆ.ಯೇಸುದಾದ್, ಹೆಚ್.ಎನ್.ನಾಗಮೋಹನ ದಾಸ್, ಡಾ.ವೈದೇಹಿ, ಡಿ.ಎಸ್.ನಾಗಭೂಷಣ, ಮುಖ್ಯಮಂತ್ರಿ ಚಂದ್ರು ಸೇರಿದಂತೆ 62 ಸಾಧಕರಿಗೆ ಪ್ರಶಸ್ತಿಯನ್ನು ನೀಡಲಾಗುತ್ತದೆ

Leave a Reply