ಕರ್ನಾಟಕ ರಾಜ್ಯಕ್ಕೆ ಮೊದಲ ಮಹಿಳೆ ಡಿಜಿ ಐಜಿಪಿ!!

ಬೆಂಗಳೂರು : ಪೊಲೀಸ್ ಇಲಾಖೆಯ ನೂತನ ಸಾರಥಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ನೀಲಮಣಿ ರಾಜು ಆಯ್ಕೆಯಾಗಿದಾರೆ, ಈ ಮೂಲಕ ಡಿಜಿ ಐಜಿಪಿ ಹುದ್ದೆಗೇರಿದ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಪೊಲೀಸ್ ಮಹಾ ನಿರ್ದೇಶಕ ಆರ್‌. ಕೆ ದತ್ತಾ ಅವರ ಅಧಿಕಾರವಧಿ ಅಕ್ಟೋಬರ್ 31ಕ್ಕೆ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಹುದ್ದೆಗೆ ಹಿರಿತನದ ಆಧಾರದಲ್ಲಿ ನೀಲಮಣಿರಾಜು ಅವರನ್ನು ಸರ್ಕಾರ ಆಯ್ಕೆ ಮಾಡಿದೆ.

ಇಂದು ಸಂಜೆ ಪೊಲೀಸ್‌ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರೂಪಕ್‌ ಕುಮಾರ್ ದತ್ತಾ ಅವರು ನೀಲಮಣಿ ಅವರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ.

ಉತ್ತರಾಖಂಡ ಮೂಲದ ನೀಲಮಣಿ ರಾಜು 1983ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿದ್ದರು.ಇವರು 2020ರವರೆಗೆ ಸೇವೆ ಸಲ್ಲಿಸಲು ಅವಕಾಶವಿದೆ.

Leave a Reply