ಎಚ್.ಡಿ.ಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಚಿಕ್ಕಮಾದು ವಿಧಿವಶ

ಮೈಸೂರು, ನವೆಂಬರ್ 1 : ಎಚ್.ಡಿ.ಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಚಿಕ್ಕಮಾದು ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಚಿಕ್ಕಮಾದು (68) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತದೇಹವನ್ನು ಆಸ್ಪತ್ರೆಯಿಂದ ಮೈಸೂರಿನ ವಿಜನಗರದ ನಿವಾಸಕ್ಕೆ ಸ್ಥಳಾಂತರ ಮಾಡಲಾಗಿದೆ.

ಜೆಡಿಎಸ್ ಶಾಸಕರಾದ ಸಾ.ರಾ.ಮಹೇಶ್, ಜಿ.ಟಿ.ದೇವೇಗೌಡ, ಜೆಡಿಎಸ್ ನಾಯಕ ಎಚ್.ವಿಶ್ವನಾಥ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಬುಧವಾರ ಸಂಜೆ ಅಂತ್ಯಕ್ರಿಯೆ ನಡೆಯಲಿದೆ.

Leave a Reply