ಹೊಸ ಸಂಕಷ್ಟದಲ್ಲಿ ಡಿ ಕೆ ಎಸ್..

ಬೆಂಗಳೂರು, ನವೆಂಬರ್ 05:ಕರ್ನಾಟಕ ಸರ್ಕಾರದ ಇಂಧನ ಸಚಿವ ಡಿಕೆ ಶಿವಕುಮಾರ್ ಅವರಿಗೆ ಮತ್ತೆ ಆದಾಯ ತೆರಿಗೆ ಇಲಾಖೆಯಿಂದ ಮತ್ತೊಮ್ಮೆ ನೋಟಿಸ್ ಜಾರಿಯಾಗಿದ್ದು, ನವೆಂಬರ್ 06ರಂದು ವಿಚಾರಣೆಗೆ ಹಾಜರಾಗಬೇಕಿದೆ.

ಡಿ.ಕೆ. ಶಿವಕುಮಾರ್ ಮತ್ತು ಕುಟುಂಬದವರು ವಿಚಾರಣೆಗೆ ಹಾಜರಾಗಬೇಕು, ಜತೆಗೆ ಚಾರ್ಟೆಡ್ ಅಕೌಂಟೆಂಟ್ ಗಳನ್ನು ಕರೆ ತರುವಂತಿಲ್ಲ ಎಂದು ನೋಟಿಸ್ ನಲ್ಲಿ ಸೂಚಿಸಲಾಗಿದೆ.

ಎರಡು ತಿಂಗಳ ಹಿಂದೆ ಸುಮಾರು 3 ದಿನಗಳ ಕಾಲ ಸದಾಶಿವನಗರದಲ್ಲಿರುವ ಸಚಿವ ಡಿ.ಕೆ. ಶಿವಕುಮಾರ್ ರವರ ಮನೆ ಸೇರಿದಂತೆ ಅವರ ಆಪ್ತರ ಸುಮಾರು 60 ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು.

ವಶಪಡಿಸಿಕೊಂದ ದಾಖಲೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆಯಲು ಡಿಕೆ ಶಿವಕುಮಾರ್, ಡಿಕೆ ಸುರೇಶ್ ಹಾಗೂ ಕುಟುಂಬದವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.

 

 

Leave a Reply