ಬಿಜೆಪಿ ಮಾಜಿ ಸಚಿವನ ಚಿತ್ತ ಜೆಡಿಎಸ್ ನತ್ತ?

ಬಿಜೆಪಿಯಲ್ಲಿ ಮೂಲೆಗುಂಪಾಗಿರುವ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ತಮ್ಮ ರಾಜಕೀಯ ಭವಿಷ್ಯಕ್ಕಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಉಹಾಪೋಹಗಳು ಹರಡುತ್ತಿದೆ.

ಕಳೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಸತೀಶ್ ಸೈಲ್ ಎದುರು ಸೋಲನುಭವಿಸಿದ್ದರು.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರುವುದಿಲ್ಲ.ಜೆಡಿಎಸ್ ಪಕ್ಷ ಕಿಂಗ್ ಮೇಕರ್ ಆಗಿ ಸರಕಾರ ರಚಿಸುವ ಸಾಧ್ಯತೆಗಳಿವೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ ಅಂತಹ ಪಕ್ಷಕ್ಕೆ ಸೇರ್ಪಡೆಯಾಗುವುದು ಸೂಕ್ತ ಎನ್ನುವ ಅಭಿಪ್ರಾಯ ಹೊಂದಿದ್ದಾರೆ.

ಒಂದು ವೇಳೆ ಸ್ವಂತ ಬಲದ ಮೇಲೆ ಜೆಡಿಎಸ್ ಪಕ್ಷ ಸರಕಾರ ರಚಿಸಿದಲ್ಲಿ ಉತ್ತಮ ಸ್ಥಾನಮಾನ ದೊರೆಯಬಹುದು ಎನ್ನುವ ನಿರೀಕ್ಷೆಯಿಂದಾಗಿ ಆನಂದ್ ಆಸ್ನೋಟಿಕರ್ ಜೆಡಿಎಸ್ ಪಕ್ಷಕ್ಕೆ ಮಣೆ ಹಾಕುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

Leave a Reply