ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಸೊಸೈಟಿಯ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ನಿರ್ಮಾಪಕ ಆನಂದ್ ಅಪ್ಪುಗೋಳ್ ಅವರಿಗೆ ಜಾಮೀನು ದೊರೆತಿದೆ. ತಮ್ಮ ಒಡೆತನದ ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಸೊಸೈಟಿ ಗ್ರಾಹಕರಿಗೆ 300 ಕೋಟಿಗೂ ಹೆಚ್ಚು ಹಣ ವಂಚಿಸಿರೋ ಆರೋಪದಡಿ ಆನಂದ್ ಅಪ್ಪುಗೋಳ್ ಅವರನ್ನು ಬಂಧಿಸಲಾಗಿತ್ತು.
ಅಪ್ಪುಗೋಳ ಅವರಿಗೆ ಧಾರವಾಡ ಹೈಕೋರ್ಟ್ ಜಾಮೀನು ನೀಡಲಾಗಿದ್ದು. ಕಳೆದ ಎರಡು ತಿಂಗಳಿನಿಂದ ಅವರು ಬೆಳಗಾವಿ ಹಿಂಡಲಗ ಜೈಲಿನಲ್ಲಿ ಇದ್ದಾರೆ. ಇಂದು ಸಂಜೆ ವೇಳೆ ಅವರು ಜೈಲಿನಿಂದ ಹೊರ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.
ಘಟನೆ ಹಿನ್ನಲೆ : ಬೆಳಗಾವಿ: ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಸೊಸೈಟಿಯ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಆನಂದ್ ಅಪ್ಪುಗೋಳ್ ಅವರನ್ನು ಮುಂಬೈನಲ್ಲಿ ಸೆಪ್ಟಂಬರ್ ತಿಂಗಳಿನಲ್ಲಿ ಬಂಧಿಸಲಾಗಿತ್ತು.
ಕೃಪೆ : ಮೂವಿ ಮಂತ್ರ