ಈ ಇಬ್ಬರು ನಾಯಕರನ್ನು ಸೆಳೆಯಲು ಜೆ ಡಿ ಎಸ್ – ಬಿಜೆಪಿ ನಡುವೆ ಪೈಪೋಟಿ.

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಏರುವ ನಿಟ್ಟಿನಲ್ಲಿ ಕಾಂಗ್ರೆಸ್, ಬಿ.ಜೆ.ಪಿ. ಹಾಗೂ ಜೆ.ಡಿ.ಎಸ್. ಈಗಾಗಲೇ ಭರ್ಜರಿ ತಯಾರಿ ನಡೆಸಿವೆ.

6 ಬಾರಿ ಚುನಾಯಿತರಾಗಿರುವ ಅಫ್ಜಲ್ ಪುರ ಶಾಸಕ ಮಾಲೀಕಯ್ಯ ಗುತ್ತೇದಾರ್, 5 ಬಾರಿ ಜಯಗಳಿಸಿರುವ ಯಾದಗಿರಿ ಶಾಸಕ ಡಾ. ಮಾಲಕರೆಡ್ಡಿ 5 -6 ಸಲ ಶಾಸಕರಾಗಿದ್ದರೂ, ಸಚಿವ ಸ್ಥಾನ ನೀಡದ ಹಿನ್ನಲೆಯಲ್ಲಿ ಅಸಮಾಧಾನಗೊಂಡಿದ್ದ ಪಕ್ಷ ತೊರೆಯಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಜೆ.ಡಿ.ಎಸ್. ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಈ ಇಬ್ಬರೂ ಶಾಸಕರನ್ನು ಪಕ್ಷಕ್ಕೆ ಆಹ್ವಾನಿಸಿದ್ದಾರೆ.

ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಮಾಲೀಕಯ್ಯ ಗುತ್ತೇದಾರ್ ಮತ್ತು ಮಾಲಿಕರೆಡ್ಡಿ ಅವರಿಗೆ ಆಹ್ವಾನಿಸಿದ್ದಾರೆ ಎನ್ನಲಾಗಿದೆ.

ಈ ಪಕ್ಷಗಳ ನಡುವೆ ಯಾವ ಪಕ್ಷಗಳ ಕಡೆ ಈ ನಾಯಕರ ಮನಸಿದ್ದೆ ಎಂದು ಕಾದು ನೋಡಬೇಕು

ಬಿ.ಜೆ.ಪಿ.ಯ 20 ಶಾಸಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಇತ್ತೀಚೆಗೆ ಹೇಳಿದ್ದರು. ಆದರೆ ಆ ನಾಯಕರುಗಳ ಹೆಸರು ಹೇಳಲು ನಿರಾಕರಿಸಿದ್ದಾರೆ.

Leave a Reply