ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ರಾಧಿಕಾ ಕುಮಾರಸ್ವಾಮಿ??

ನಟಿ ರಾಧಿಕ ಕುಮಾರ ಸ್ವಾಮಿ ಅವರು ರಾಜಕೀಯಕ್ಕೆ ಬರುತ್ತಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸೇರುವ ಬಗ್ಗೆ ತಮ್ಮ ಆತ್ಮೀಯರ ಕಡೆಯಿಂದ ಸಿ.ಎಂ ಸಿದ್ದರಾಮಯ್ಯ ಅವರಿಗೆ ಈ ವಿಷಯ ಮುಟ್ಟಿಸಿದ್ದಾರೆ ಎನ್ನಲಾಗಿದೆ.

ರಾಧಿಕ ಕುಮಾರ ಸ್ವಾಮಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುವ ಆಸೆ ಇರುವುದಕ್ಕೆ ಪ್ರಮುಖ ಕಾರಣ ಹಾಗೂ ಸ್ಪೂರ್ತಿ ಮಂಡ್ಯ ಮಾಜಿ ಸಂಸದೆ, ನಟಿ ರಮ್ಯಾ ಅವರು ಕಾರಣವಂತೆ. ರಾಷ್ಟ್ರ ರಾಜಕಾರಣದಲ್ಲಿ ರಮ್ಯ ಅವರು ಸಖತ್ತು ಆಗಿ ಮಿಂಚುತ್ತಿದ್ದು, ಅವರ ಹಾಗೇ ನಾನು ಆಗಬೇಕು ಅದಕ್ಕೆ ಸೂಕ್ತವಾದ ಪಕ್ಷ ಕಾಂಗ್ರೆಸ್ ಹಾಗಾಗಿ ಕಾಂಗ್ರೆಸ್ ಸೇರುವ ನಿರ್ಧಾರಕ್ಕೆ ಬಂದಿದ್ದರಂತೆ.

ಆದರೆ ಸಿ.ಎಂ ಸಿದ್ದರಾಮಯ್ಯ ಅವರು ಸದ್ಯಕ್ಕೆ ಪಕ್ಷಕ್ಕೆ ಅವರು ಸೇರ್ಪಡೆಯಾದರೇ ಲಾಭಕ್ಕಿಂತ ನಷ್ಟವೇ ಹೆಚ್ಚು ಹಾಗಾಗಿ ರಾಧಿಕ ಕುಮಾರ ಸ್ವಾಮಿ ಅವರು ಪಕ್ಷಕ್ಕೆ ಸೇರ್ಪಡೆ ಕುರಿತು ರೆಡ್ ಸ್ನಿಗಲ್ ನೀಡಿದ್ದಾರೆ ಎನ್ನಲಾಗಿದೆ.

ಇದಲ್ಲದೇ ಅವರು ಹಲವು ಸಾರಿ ರಾಜಕೀಯಕ್ಕೆ ಬರುವ ಇಚ್ಚೆಯನ್ನು ಕೂಡ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದರು ಕೂಡ. ರಾಧಿಕಾ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುವ ಬಗ್ಗೆ ಹರಿದಾಡುತ್ತಿರುವ ಸುದ್ದಿ ಬಗ್ಗೆ ಖುದ್ದು ಅವರೇ ಸ್ಪಷ್ಟನೆ ನೀಡಬೇಕಾಗಿದೆ.

Leave a Reply