ಅವನತಿಯತ್ತ ಬಳ್ಳಾರಿ ರೆಡ್ಡಿ ಸಾಮ್ರಾಜ್ಯ

ಬಳ್ಳಾರಿ : ಕಳೆದ ಎರಡು ದಿನಗಳ ಹಿಂದಷ್ಟೇ ಬಿಜೆಪಿಗೆ ಗುಡ್ ಬೈ ಹೇಳಿದ್ದ ಗಣಿಧಣಿ ಜನಾರ್ಧನ ರೆಡ್ಡಿ ಅವರ ಆಪ್ತ ನಾಗೇಂದ್ರ ಅವರು ಕಾಂಗ್ರೆಸ್‌ ಸೇರ್ಪಡೆ ಬಳಿಕ ಮತ್ತೊಬ್ಬ ಬಿಜೆಪಿ ಮುಖಂಡ ಆನಂದ್‌ ಸಿಂಗ್‌ ಬಿಜೆಪಿ ಪಕ್ಷ ತೊರೆಯಲು ನಿರ್ಧರಿಸಿರುವುದಾಗಿ ತಿಳಿದುಬಂದಿದೆ.

ಗಣಿ ಉದ್ಯಮಿ ಕಿಶೋರ್‌ ಪತ್ತಿಗೊಂಡ ಅವರ ಪಕ್ಷ ಸೇರ್ಪಡೆಗೆ ಆನಂದ್‌ ಸಿಂಗ್‌ ವಿರೋಧ ವ್ಯಕ್ತಪಡಿಸಿದ್ದು, ಇದರಿಂದ ಅಸಮಾಧಾನಗೊಂಡಿರುವ ಸಿಂಗ್‌ ಪಕ್ಷ ಬಿಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬಳ್ಳಾರಿ ಬಿಜೆಪಿಯಲ್ಲಿ ಇರುಸುಮುರಿಸಿನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಜನವರಿ 5ರಂದು ನಡೆಯಬೇಕಿದ್ದ ಪರಿವರ್ತನಾ ಯಾತ್ರೆ ರದ್ದಾಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ಆನಂದ್‌ ಸಿಂಗ್‌ ಪಕ್ಷ ಬಿಡುವ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಸಂಸದ ಶ್ರೀರಾಮುಲು, ಮಾಜಿ ವಿಧಾನಪರಿಷತ್‌ ಸದಸ್ಯ ಮೃತ್ಯುಂಜಯ ಜಿನಗಾ ಸೇರಿದಂತೆ ಅನೇಕ ಮುಖಂಡರು ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ.

Leave a Reply