ಮಂಡ್ಯ ಕಾಂಗ್ರೆಸ್ ನಲ್ಲಿ ಬಂಡಾಯದ ಹೊಗೆ…!

ಜನವರಿ 16 , ಮಂಡ್ಯ: ಚುನಾವಣೆಗೂ ಮುನ್ನವೇ ಮಂಡ್ಯ ಕಾಂಗ್ರೆಸ್ನಲ್ಲಿ ಬಂಡಾಯದ ಹೊಗೆಯಾಡುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಗೆ ಮೊದಲ ಬಂಡಾಯದ ಬಿಸಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಿಂದ ತಟ್ಟಲಿದೆ.

ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂ.ಪುಟ್ಟೇಗೌಡರು ಪಕ್ಷದ ಮೂಲ ಕಾರ್ಯಕರ್ತರಿಗೆ ಈ ಬಾರಿ ಟಿಕೆಟ್ ನೀಡದೆ ಹೋದರೆ ಬಂಡಾಯದ ಎಚ್ಚರಿಕೆ ನೀಡಿದ್ದಾರೆ.

ಅಂಬರೀಶ್ ಸೋಲಿಸಿದ್ದೆ ನನ್ನ ಸಾಧನೆ ಎಂದು ಹೇಳೋ ಶಾಸಕ ರಮೇಶ್ ಬಾಬುಗೆ ಕಾಂಗ್ರೆಸ್ ಟಿಕೆಟ್ ನೀಡಲು ಪುಟ್ಟೇಗೌಡ ವಿರೋಧ ವ್ಯಕ್ತಪಡಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ರಮೇಶ್ ಬಾಬು ಟಿಕೆಟ್ ನೀಡುವುದರ ಬಗ್ಗೆ ಬಹಿರಂಗವಾಗಿ ವಿರೋಧಿಸಿದ್ದಾರೆ.

ಈ ಹಿಂದೆ ಎಸ್.ಎಂ ಕೃಷ್ಣ ಬಣದಲ್ಲಿ ಇದ್ದ ರವೀಂದ್ರ ಶ್ರೀಕಂಠಯ್ಯ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿ ಆಗಿ ಎರಡನೇ ಸ್ಥಾನ ಪಡೆದಿದ್ದ ರವೀಂದ್ರ ಶ್ರೀಕಂಠಯ್ಯ.

Leave a Reply