ಪ್ರಸಕ್ತ ವರ್ಷದಿಂದ ಹಜ್‌ ಯಾತ್ರಿಕರ ಸಬ್ಸಿಡಿ ರದ್ದು!!

ಹೊಸದಿಲ್ಲಿ: ಪ್ರಸಕ್ತ ಆರ್ಥಿಕ ಸಾಲಿನಿಂದ ಹಜ್‌ ಯಾತ್ರಿಕರಿಗೆ ಸಬ್ಸಿಡಿ ನೀಡುವುದನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ.

ಮಂಗಳವಾರ ಹೊಸದಿಲ್ಲಿಯಲ್ಲಿ ಸುದ್ದಿಗಾರರಿಗೆ ಈ ವಿಷಯವನ್ನು ಅಲ್ಪಸಂಖ್ಯಾತ ವ್ಯವಹಾರ ಸಚಿವ ಮುಖ್ತಾರ್‌ ಅಬ್ಬಾಸ್‌ ನಖ್ವಿ ಸ್ಪಷ್ಟಪಡಿಸಿದರು.

ಅಲ್ಪಸಂಖ್ಯಾತರ ಸಬಲೀಕರಣಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಯಾವುದೇ ಓಲೈಕೆ ಇಲ್ಲದೇ ಸಬಲೀಕರಣಕ್ಕೆ ಒತ್ತು ನೀಡಲಾಗುವುದು ಎಂದು ಸಚಿವರು ತಿಳಿಸಿದರು.

2012ರಲ್ಲಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪಿನ ಅನ್ವಯ ಸಬ್ಸಿಡಿ ನೀಡುವುದನ್ನು ಹಿಂತೆಗೆದುಕೊಳ್ಳಲಾಗಿದೆ. 2022ರ ವೇಳೆಗೆ ಸಬ್ಸಿಡಿ ಹಿಂತೆಗೆದುಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ತಿಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಈ ಸಬ್ಸಿಡಿಯನ್ನು ಶಿಕ್ಷಣ ಯೋಜನೆಗಳಿಗೆ ಹಾಗೂ ಅಲ್ಪಸಂಖ್ಯಾತ ಬಾಲಕಿಯರ ಶ್ರೇಯೋಭಿವೃದ್ಧಿ ಯೋಜನೆಗಳಿಗೆ ಬಳಸಲಾಗುವುದು ಎಂದು ವಿಜಯ ಕರ್ನಾಟಕ ಸೋದರ ಸಂಸ್ಥೆ ಟೈಮ್ಸ್‌ ಆಫ್‌ ಇಂಡಿಯಾಗೆ ನಖ್ವಿ ತಿಳಿಸಿದರು.

2018ರಲ್ಲಿ ಅತಿ ಹೆಚ್ಚು ಮಂದಿ ಹಜ್‌ ಯಾತ್ರೆಗೆ ತೆರಳುತ್ತಿದ್ದಾರೆ. ಈ ಬಾರಿ 1.75 ಲಕ್ಷ ಮಂದಿ ಯಾತ್ರೆಗೆ ತೆರಳುತ್ತಿದ್ದಾರೆ ಎಂದ ಸಚಿವರು

Leave a Reply