ನಾಪತ್ತೆಯಾಗಿದ್ದ ತೊಗಾಡಿಯಾ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ

ಜನವರಿ 16:   ನಾಪತ್ತೆಯಾಗಿದ್ದ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಪ್ರಜ್ಞಾಹೀನ ಸ್ಥಿತಿಯಲ್ಲಿ ಅಹ್ಮದಾಬಾದಿನ ಆಸ್ಪತ್ರೆಯೊಂದರಲ್ಲಿ ಪತ್ತೆಯಾಗಿದ್ದಾರೆ. ಪ್ರಕರಣವೊಂದರಲ್ಲಿ ತೊಗಾಡಿಯಾ ಅವರನ್ನು ವಶಕ್ಕೆ ಪಡೆಯಲೆಂದು ಜ.15 ರಂದು ಅವರ ಮನೆಗೆ ತೆರಳಿದ್ದ ರಾಜಸ್ಥಾನಿ ಪೊಲೀಸರಿಗೆ ತೊಗಾಡಿಯಾ ಮನೆಯಲಿಲ್ಲದಿರುವುದು ಗೊತ್ತಾಗಿದೆ. ನಂತರ ಅವರನ್ನು ಹುಡುಕಿದಾಗ ಅಹ್ಮದಾಬಾದಿನ ಚಂದ್ರಮಣಿ ಆಸ್ಪತ್ರೆಯಲ್ಲಿರುವುದು ತಿಳಿದುಬಂದಿದೆ.

ದೇಹದಲ್ಲಿ ಸಕ್ಕರೆ ಪ್ರಮಾಣ ಕಡಿಮೆಯಾದ್ದರಿಂದ ಅವರು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಪೊಲೀಸರು ತೊಗಾಡಿಯಾ ಅವರನ್ನು ವಶಕ್ಕೆ ಪಡೆಯಲು ಹೊರಟಿದ್ದ ಸುದ್ದಿ ತಿಳಿಯುತ್ತಿದ್ದಂತೆಯೇ ವಿಎಚ್ ಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

Leave a Reply