“ರ್‍ಯಾಂಬೋ 2′ ಚಿತ್ರದ ಮೂಲಕ ಕನ್ನಡಕ್ಕೆ ಹೊಸ ಗಾಯಕಿ ಅದಿತಿ ಅರುಣ್‌ ಸಾಗರ್‌

ಶರಣ್‌ ಅಭಿನಯದ “ರ್‍ಯಾಂಬೋ 2′ ಚಿತ್ರದ ಮೂಲಕ ಕನ್ನಡಕ್ಕೆ ಹೊಸ ಗಾಯಕಿಯ ಪರಿಚಯವಾಗುತ್ತಿದೆ. ಆ ಗಾಯಕಿ ಯಾರು ಗೊತ್ತಾ? ನಟ ಹಾಗೂ ಕಲಾ ನಿರ್ದೇಶಕ ಅರುಣ್‌ ಸಾಗರ್‌ ಅವರ ಮುದ್ದಿನ ಮಗಳು ಅದಿತಿ. 15 ವರ್ಷದ ಅದಿತಿ ಈಗ “ರ್‍ಯಾಂಬೋ 2′ ಚಿತ್ರದಲ್ಲಿ ಹಿನ್ನೆಲೆ ಗಾಯಕಿಯಾಗಿ ಪರಿಚಿತರಾಗಿದ್ದಾರೆ.

ಈ ಚಿತ್ರಕ್ಕಾಗಿ ಅದಿತಿ ಅವರಿಂದ “ಧಮ್‌ ಮಾರೋ ಧಮ್‌ …’ ಎಂಬ ಹಾಡನ್ನು ಹಾಡಿಸಿದ್ದಾರೆ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ. ಈ ಹಾಡು ಇತ್ತೀಚೆಗೆ ಸೋಷಿಯಲ್‌ ಮೀಡಿಯಾದಲ್ಲಿ ಬಿಡುಗಡೆಯಾಗಿತ್ತು. ಈಗ ಹಾಡಿನ ಲಿರಿಕಲ್‌ ವೀಡಿಯೋ ಸಹ ಬಿಡುಗಡೆಯಾಗಿದೆ. ಶರಣ್‌ ತಮ್ಮ ಲಡ್ಡು ಸಿನಿಮಾ ಬ್ಯಾನರ್‌ನಡಿ ಈ “ರ್‍ಯಾಂಬೋ 2′ ಚಿತ್ರವು ಬಿಡುಗಡೆಯಾಗುತ್ತಿದ್ದು, ಚಿತ್ರದ ನಿರ್ಮಾಣದಲ್ಲಿ ಅಟ್ಲಾಂಟ ನಾಗೇಂದ್ರ ಹಾಗೂ ಚಿತ್ರಕ್ಕೆ ಕೆಲಸ ಮಾಡುವ ತಂತ್ರಜ್ಞರು ಕೈ ಜೋಡಿಸಿದ್ದಾರೆ.

ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ, ಛಾಯಾಗ್ರಾಹಕ ಸುಧಾಕರ್‌ ರಾಜ್‌, ಸಂಕಲನಕಾರ ಕೆ.ಎಂ. ಪ್ರಕಾಶ್‌, ಕಲಾ ನಿರ್ದೇಶಕ ಮೋಹನ್‌ ಬಿ ಕೆರೆ, ಕ್ರಿಯೇಟಿವ್‌ ಹೆಡ್‌ ತರುಣ್‌ ಸುಧೀರ್‌ ಇವರೆಲ್ಲಾ ವರ್ಕಿಂಗ್‌ ಪಾಟ್ನರ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ. ಚಿತ್ರದಿಂದ ಬಂದ ಲಾಭದಲ್ಲಿ ಎಲ್ಲರಿಗೂ ಶೇರ್‌ ಸಿಗಲಿದೆಯಂತೆ. ಈ ಹಿಂದೆ “ದಿಲ್‌ವಾಲ’ ಚಿತ್ರ ಮಾಡಿದ್ದ ಅನಿಲ್‌ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಶರಣ್‌ಗೆ ನಾಯಕಿಯಾಗಿ ಆಶಿಕಾ ನಟಿಸಿದ್ದಾರೆ.

ಕೃಪೆ : ಉದಯವಾಣಿ

Leave a Reply