ರಿವಾಲ್ವರ್ ನಿಂದ ಶೂಟ್ – ಆತ್ಮಹತ್ಯೆ ಗೆ ಶರಣಾದ ನಿವೃತ್ತ ಯೋಧ

ನಿವೃತ್ತ ಯೋಧರೊಬ್ಬರು ತನ್ನ ಬಳಿಯಿದ್ದ ರಿವಾಲ್ವರ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೊರಮಾವಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ನಿವೃತ್ತ ಯೋಧ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಇವರು ಎಲೈಟ್ ಅಪಾರ್ಟ್‍ಮೆಂಟ್ ನಿವಾಸಿಯಾಗಿದ್ದ ಅನಿಲ್ ಅಹುಜಾ ಎಂದು ಗುರುತಿಸಲಾಗಿದೆ. ಜೊತೆಗೆ ಸಾಕಷ್ಟು ಸಲ ಆತ್ಮಹತ್ಯೆಗೆ ಕೂಡ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಭಾನುವಾರ ರಾತ್ರಿ ತನ್ನ ರೂಮ್‍ನಲ್ಲಿ ಶೂಟ್ ಮಾಡಿಕೊಂಡು ಅನಿಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Leave a Reply