ಸಿ.ಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿರವುದೇಕೆ?

ಬೆಂಗಳೂರು:ರಾಜ್ಯಸಭಾ ಚುನಾವಣೆ ಹಿನ್ನೆಲೆ ಮೂರನೇ ಅಭ್ಯರ್ಥಿ ಸ್ಪರ್ಧೆ ಹಾಗೂ ಆಯ್ಕೆ ಬಗ್ಗೆ ಚರ್ಚೆಗೆ ಇಂದು ಸಿಎಂ‌ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಸಿಎಂಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಕೂಡ ಜೊತೆಯಾಗಲಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಸ್ಪರ್ಧೆ ಹಾಗೂ ಅಭ್ಯರ್ಥಿ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗಡದುಕೊಳ್ಳುವ ಸಾಧ್ಯತೆ ಇದೆ. ಚುನಾವಣೆಯಲ್ಲಿ ಕಾಂಗ್ರೆಸ್ ಸುಲಭವಾಗಿ ಎರಡು ಸ್ಥಾನಗಳನ್ನು ಗೆಲ್ಲಬಹುದು. ಆ 2 ಸ್ಥಾನಕ್ಕೆ ಅಲ್ಪಸಂಖ್ಯಾತ ಹಾಗೂ ದಲಿತ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಯಲಿದೆ. ಮೂರನೇ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆಯೂ ಚರ್ಚೆ ನಡೆಯಲಿದೆ. ಲಿಂಗಾಯತ ಸಮುದಾಯಕ್ಕೆ 3ನೇ ಸ್ಥಾನ ಬಿಟ್ಟುಕೊಡಲು ಚಿಂತನೆ ನಡೆದಿದ್ದು‌ ಹಿರಿಯ ನಾಯಕ ಶಾಮನೂರು ಶಿವಶಂಕಪ್ಪರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ಸಾಧ್ಯತೆ. ರಾಹುಲ್ ಗಾಂಧಿ ಚರ್ಚೆ ಬಳಿಕ ಅಭ್ಯರ್ಥಿಗಳ ಹೆಸರು ಪ್ರಕಟಿಸುವ ಸಾಧ್ಯತೆಯಿದೆ.

ಇನ್ನು 3ನೇ ಸ್ಥಾನಕ್ಕೆ ನಮಗೆ ಬೆಂಬಲಿಸುವಂತೆ ಜೆಡಿಎಸ್ ಕಾಂಗ್ರೆಸ್ ಜೊತೆ ಕುಪೇಂದ್ರ ರೆಡ್ಡಿ ಮೂಲಕ ಚರ್ಚೆ ನಡೆಸುತ್ತಿದೆ. ಒಂದು ವೇಳೆ ಬೆಂಬಲ ನೀಡದಿದ್ರೆ ಬಿಬಿಎಂಪಿಯಲ್ಲಿನ ಮೈತ್ರಿ ಮುರಿದುಕೊಳ್ಳುವುದಾಗಿ ಕೂಡ ತಿಳಿಸಿದೆ ಎನ್ನಲಾಗಿದೆ. ಇಂದಿನ ಕಾಂಗ್ರೆಸ್ ಹೈಕಮಾಂಡ್ ಸಭೆ ಕೂಡಾ ಕುತೂಹಲ ಮೂಡಿಸಿದೆ.

Leave a Reply