ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ತಾತ್ಕಾಲಿಕ ಬ್ರೇಕ್.

ಬೆಂಗಳೂರು/ಹಾಸನ : ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ತಾತ್ಕಾಲಿಕ ಬ್ರೇಕ್.

ಹಾಸನ ಡಿಸಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಿಎಟಿಗೆ ಅರ್ಜಿ ಸಲ್ಲಿಸಿದ್ದಾರೆ. ಅವಧಿಗೂ ಮುನ್ನ ತನ್ನನ್ನು ವರ್ಗಾವಣೆ ಮಾಡಲಾಗಿದೆ ಎಂದು ತಾನು ಸಲ್ಲಿಸಿದ್ದ ಅರ್ಜಿಯಲ್ಲಿ ರೋಹಿಣಿ ಸಿಂಧೂರಿ ಉಲ್ಲೇಖಿಸಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಕೇಂದ್ರಿಯ ಆಡಳಿತಾತ್ಮಕ ನ್ಯಾಯಾಧೀಕರಣ ಮಾ.13ರವರೆಗೆ ವರ್ಗಾವಣೆಗೆ ತಡೆ ನೀಡಿದೆ. ವಿಚಾರಣೆಗೆ ಹಾಜರಾಗಿದ್ದ ಸರ್ಕಾರದ ಪರ ವಕೀಲ ಪೊನ್ನಣ್ಣ ಈ ಬಗ್ಗೆ ಉತ್ತರಿಸಲು ಕಾಲಾವಕಾಶ ಕೋರಿದ ಹಿನ್ನಲೆ ಸದ್ಯಕ್ಕೆ ವರ್ಗಾವಣೆಗೆ ತಡೆ ನೀಡಲಾಗಿದೆ.

ಕಳೆದ ಕೆಲ ದಿನಗಳ ಹಿಂದೆಯೂ ರೋಹಿಣಿಯವರನ್ನು ವರ್ಗಾವಣೆ ಮಾಡಲಾಗಿತ್ತು. ಆಗ ಚುನಾವಣಾ ಆಯೋಗ ವರ್ಗಾವಣೆಗೆ ತಡೆ ನೀಡಿತ್ತು. ಮಾ.13ರಂದು ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರ ತೀರ್ಮಾನವಾಗಲಿದೆ.

Leave a Reply