ಸ್ಯಾನಿಟರಿ ಪ್ಯಾಡ್ಗಳು ಅರ್ಧ ಬೆಲೆಗೆ – ಚಂದ್ರಬಾಬು ನಾಯ್ಡು

ಅಂತರರಾಷ್ಟ್ರೀಯ ಮಹಿಳಾ ದಿನ ಸಂದರ್ಭದಲ್ಲಿ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು, ಗರ್ಭಿಣಿಯರು ಹಾಗೂ ನವಜಾತ ಶಿಶುಗಳ ಆರೋಗ್ಯ ಪರೀಕ್ಷೆಗಾಗಿ ವಿಶೇಷ ವ್ಯವಸ್ಥೆ ಕಲ್ಪಿಸಿರುವುದಾಗಿ ಹೇಳಿದರು. ಶೀಘ್ರದಲ್ಲಿಯೇ ಸ್ಯಾನಿಟರಿ ಪ್ಯಾಡ್ಗಳು ಅರ್ಧ ಬೆಲೆಗೆ ಸಿಗಲಿವೆ ಎಂದು ಘೋಷಿಸಿದ್ದಾರೆ.

ಅಪೌಷ್ಠಿಕತೆ ನಿರ್ಮೂಲನೆ, ಮಕ್ಕಳು ಮತ್ತು ಮಹಿಳೆಯರ ಆರೋಗ್ಯ ಸುಧಾರಣೆಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರೊಂದಿಗೆ ಸ್ಯಾನಿಟರಿ ಪ್ಯಾಡ್ಗಳನ್ನು ಅರ್ಧ ಬೆಲೆಯಲ್ಲಿ ಸಿಗುವಂತೆ ಮಾಡಲು ಅಗತ್ಯ ನೀತಿ ಅನುಷ್ಠಾನಗೊಳಿಸಲಾಗುತ್ತದೆ ಎಂದರು.

Leave a Reply