ಪರಮೇಶ್ವರ್ ಅವರ ಆಪ್ತ ರಘು ಆಚಾರ್ ಮೇಲೆ ಐಟಿ ಬ್ರಹ್ಮಾಸ್ತ್ರ

ಚಿತ್ರದುರ್ಗ ಜಿಲ್ಲೆಯಿಂದ ವಿಧಾನ ಪರಿಷತ್ ಸದಸ್ಯರಾಗಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ರಘು ಆಚಾರ್ ಅವರ ಮನೆ ಮೇಲೆ ಐಟಿ ದಾಳಿ ನಡೆದಿದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ಆಪ್ತ. ಐಟಿ ಅಧಿಕಾರಿಗಳು ನಿವಾಸ ಮತ್ತು ಕಚೇರಿಯಲ್ಲಿ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಎಚ್.ಎಸ್.ಆರ್.ಲೇಔಟ್ನಲ್ಲಿರುವ ನಿವಾಸ ಮತ್ತು ಕಚೇರಿಯ ಮೇಲೆ ಇಂದು ಮಧ್ಯಾಹ್ನ ದಾಳಿ ನಡೆಸಲಾಗಿದೆ. 10 ಕ್ಕೂ ಅಧಿಕ ಅಧಿಕಾರಿಗಳು ನಿವಾಸದಲ್ಲಿ ದಾಖಲಾತಿಗಳನ್ನು ಪರಿಶೀಲಿಸುತ್ತಿದ್ದಾರೆ.

ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯರ ಆಯ್ಕೆಗೆ ನಡೆಯುವ ಚುನಾವಣೆಯಲ್ಲಿ ರಘು ಆಚಾರ್ ಅವರು ಚಿತ್ರದುರ್ಗ ಕ್ಷೇತ್ರದಿಂದ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ. 2013ರ ಆಗಸ್ಟ್ 22ರಂದು ನಡೆದಿದ್ದ ಚುನಾವಣೆಯಲ್ಲಿ ರಘು ಆಚಾರ್ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು, ಬಳಿಕ ಅವರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

Leave a Reply