ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಅಪಘಾತ – ವಿಮಾನಕ್ಕೆ ಬೆಂಕಿ

67 ಪ್ರಯಾಣಿಕರಿದ್ದ ಬಾಂಗ್ಲಾದೇಶದ ನಾಗರಿಕ ವಿಮಾನವೊಂದು ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಅಪಘಾತಕ್ಕೀಡಾಗಿರುವ ಘಟನೆ ನಡೆದಿದ್ದು ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದು, ಕೆಲವರು ಮಾತ್ರ ಬದುಕಿಳಿದ್ದಾರೆ ಎಂದು ವರದಿಯಾಗಿದೆ.

ವಿಮಾನದಲ್ಲಿ ನಾಲ್ವರು ಸಿಬ್ಬಂದಿ ಹಾಗೂ 67 ಪ್ರಯಾಣಿಕರಿದ್ದರು. ಢಾಕದಿಂದ ಅಮೇರಿಕಾಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವಾಗ ಅಪಘಾತಕ್ಕೀಡಾಗಿದ್ದು, ಕೂಡಲೇ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ವಿಮಾನದಲ್ಲಿದ್ದ 17 ಮಂದಿಯನ್ನ ರಕ್ಷಣೆ ಮಾಡಲಾಗಿದೆ ಎಂದು ವಿಮಾನ ನಿಲ್ದಾಣ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉಳಿದ ಪ್ರಯಾಣಿಕರ ಸ್ಥಿತಿ ಬಗ್ಗೆ ಸದ್ಯಕ್ಕೆ ಹೆಚ್ಚಿನ ಮಾಹಿತಿ ಸಿಕ್ಕಿಲ್ಲ ಎಂದು ವಿಮಾನ ನಿಲ್ದಾಣ ವಕ್ತಾರರಾದ ಬೀರೇಂದ್ರ ಪ್ರಸಾದ್ ಶ್ರೇಷ್ಠ ಹೇಳಿದ್ದಾರೆ.

ಘಟನ ಸಂಬಂಧ ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ವಿಮಾನ ನಿಲ್ದಾಣ ಅಧಿಕಾರಿಗಳು ಘಟನೆ ನಡೆದ ಸ್ಥಳದಲ್ಲಿ ದಟ್ಟ ಹೊಗೆ ಅವರಿಸಿದ್ದು ಸ್ಥಳಕ್ಕೆ ರಕ್ಷಣಾ ಕಾರ್ಯಚರಣೆ ಭರದಿಂದ ಸಾಗಿದೆ ಅಂತ ತಿಳಿಸಿದ್ದಾರೆ. ಘಟನೆ ಕುರಿತಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Reply