ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ದೊರೆತ ‘ಉಚಿತ ಲ್ಯಾಪ್ ಟಾಪ್ ಯೋಜನೆ’

ಚಿಕ್ಕನಾಯಕನಹಳ್ಳಿಯ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್‍ ಭಾಗ್ಯ ದೊರತಿದೆ. ಎಸ್‍ಸಿ, ಎಸ್‍ಟಿ ಜನಾಂಗದ ಪದವಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಲ್ಯಾಪ್‍ಟಾಪ್‍ನ್ನು ತಿಂಗಳ ಕೊನೆಯಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ನೀಡಲು ತೀರ್ಮಾನಿಸಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಹೇಳಿದರು. ಪುರಸಭಾಧ್ಯಕ್ಷ ಮಹಮದ್‍ಖಲಂದರ್, ಸದಸ್ಯ ಅಶೋಕ್, ಮಾಜಿ ಶಾಸಕ ಬಿ.ಲಕ್ಕಪ್ಪ, ಪ್ರಾಂಶುಪಾಲ ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಸುಮಾರು 40ಕ್ಕೂ ಹೆಚ್ಚು ವಿಶ್ವವಿದ್ಯಾನಿಲಯದಲ್ಲಿ ಹೆಣ್ಣು ಮಕ್ಕಳೇ ಶಿಕ್ಷಣ ಪಡೆಯುವುದರಲ್ಲಿ ಮುಂದಿದ್ದು, ಕಳೆದ ಐದು ವರ್ಷಗಳಿಂದ ವಿದ್ಯಾರ್ಥಿನಿಯರು ರ್ಯಾಂಕ್ ಹಾಗೂ ಗೋಲ್ಡ್ ಮೆಡಲ್ ಪಡೆಯುವುದರಲ್ಲಿ 100ಕ್ಕೆ ಶೇ.70ರಷ್ಟು ಮುಂದಿದ್ದಾರೆ ಎಂದು ತಿಳಿಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಾಲೇಜಿನ ನೂತನ ಕಟ್ಟಡ, ಶುದ್ದ ಕುಡಿಯುವ ನೀರು, ಸೈಕಲ್ ಸ್ಟ್ಯಾಂಡ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು, ಆ ಸ್ಥಾನದಲ್ಲಿ ಭಾರತ ಪ್ರಪಂಚದಲ್ಲೇ ಮೊದಲ ಸ್ಥಾನದಲ್ಲಿದೆ, ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನವಿಲ್ಲದಿದ್ದರೆ ಏನೊಂದು ಮಾಡಲು ಸಾಧ್ಯವಿಲ್ಲ, ಪ್ರತಿಯೊಂದು ತಂತ್ರಜ್ಞಾನ ಕ್ಷೇತ್ರದಲ್ಲಿ ನಿಂತಿದೆ ಹಾಗಾಗಿ ಎಲ್ಲಾ ವಿದ್ಯಾರ್ಥಿಗಳಿಗೂ ಲ್ಯಾಪ್‍ಟಾಪ್ ನೀಡುವ ಮೂಲಕ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಲು ಸರ್ಕಾರ ಚಿಂತಿಸಿದೆ ಎಂದರು.

ಶಾಸಕ ಸಿ.ಬಿ.ಸುರೇಶ್‍ಬಾಬು ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿ ಮೂಲಭೂತ ಸೌಕರ್ಯಗಳು ದೊರಕುವಂತಾದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಕ್ರೀಡೆ, ಕಲೆ, ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಆಸಕ್ತಿ ಮೂಡಬೇಕು, ಮುಂದೆ ನಿಮ್ಮ ಗುರಿ ಇಟ್ಟುಕೊಂಡು ಶ್ರಮಿಸಿದರೆ ಸಾಧನೆಯ ಶಿಖರವನ್ನೇರಬಹುದು ಎಂದರು.

Related image

Leave a Reply