ನಮ್ಮ ಮೆಟ್ರೋ ಸಿಬ್ಬಂದಿಗಳಿಗೆ ಸಂದೇಶ ರವಾನಿಸಿದ BMRCL ಮಂಡಳಿ

ಇದೇ ತಿಂಗಳ 22 ರಂದು ನಮ್ಮ ಮೆಟ್ರೋ ರೈಲು ನೌಕರರು ಉದ್ದೇಶಿಸಿರುವ ಮುಷ್ಕರಕ್ಕೆ ಸಂಬಂಧಿಸಿದಂತೆ ಬಿಎಂಆರ್ ಸಿಎಲ್ ಪ್ರಾದೇಶಿಕ ಕಾರ್ಮಿಕ ಆಯುಕ್ತರ ಮೂಲಕ ಸಂಧಾನ ಪ್ರಕ್ರಿಯೆ ನಡೆಸುತ್ತಿದ್ದು, ಮಾ.16 ರಂದು ನಡೆಯುವ ವಿಚಾರಣೆ ಸಂದರ್ಭದಲ್ಲಿ ಒಕ್ಕೂಟದ ಪ್ರತಿನಿಧಿಯೊಬ್ಬರು ಪಾಲ್ಗೊಳ್ಳುವಂತೆ ಆಯುಕ್ತರು ತಿಳಿಸಿದ್ದಾರೆ.

ಈ ಮಧ್ಯೆ ಅಂದು ಕಪ್ಪುಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾದರೆ ಸಿಬ್ಬಂದಿ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಬಿಎಂಆರ್ ಸಿಎಲ್ ಆಡಳಿತ ಮಂಡಳಿ ತನ್ನ ಸಿಬ್ಬಂದಿಗೆ ಎಚ್ಚರಿಕೆ ನೀಡಿದೆ. ರೈಲು ಕಾರ್ಯಾಚರಣೆ ಮತ್ತು ನಿರ್ವಹಣೆ ನೌಕರರು ಕರ್ತವ್ಯದಲ್ಲಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ವೈಯಕ್ತಿಕ ವಿಭಾಗದ ಸಹಾಯಕ ಮ್ಯಾನೇಜರ್ ಸಹಿ ಮಾಡಿರುವ ಪತ್ರದಲ್ಲಿ ತಿಳಿಸಲಾಗಿದೆ.

ಕಾರ್ಮಿಕ ಆಯೋಗದಲ್ಲಿನ ಪ್ರಕ್ರಿಯೆಗಳು ಮುಗಿಯುವವರೆಗೂ ಯಾವುದೇ ಮುಷ್ಕರ ನಡೆಸುವಂತಿಲ್ಲ ಎಂದು ಕಾನೂನು ತಜ್ಞರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಹೇಳಿದ್ದಾರೆ. ಇದೇ 16 ರಂದು ಯಶವಂತಪುರದಲ್ಲಿನ ಕಾರ್ಮಿಕ ಆಯೋಗದ ಕಚೇರಿಯಲ್ಲಿ ವಿಚಾರಣೆಗೆ ಬರುವಂತೆ ತಿಳಿಸಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನೌಕರರ ಒಕ್ಕೂಟದ ಉಪಾಧ್ಯಕ್ಷ ಸೂರ್ಯನಾರಾಯಣ ಮೂರ್ತಿ ತಿಳಿಸಿದ್ದಾರೆ.

ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಂದ್ರ ಜೈನ್, ತನ್ನ ಕಚೇರಿಗೆ ಸಿಬ್ಬಂದಿ ಕರೆದು ಅವರ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸುವ ಪ್ರಯತ್ನ ಮಾಡುತ್ತಿದ್ದಾರೆ. ಬೈಯಪ್ಪನಹಳ್ಳಿ ಹಾಗೂ ಶಾಂತಿನಗರದಲ್ಲಿನ ಬಿಎಂಆರ್ ಸಿಎಲ್ ಕಚೇರಿ ಮುಂಭಾಗ ಸಾರ್ವಜನಿಕ ಹಿತಾಸಕ್ತಿಯಿಂದ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಲಾಗುವುದು ಎಂದು ಒಕ್ಕೂಟದ ಮುಖಂಡ ಸೂರ್ಯನಾರಾಯಣ ಮೂರ್ತಿ ತಿಳಿಸಿದ್ದಾರೆ.

Image result for namma metro

Leave a Reply