ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ ಕೊನೆಯ ವಾರ

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಏಪ್ರಿಲ್ ಕೊನೆಯ ವಾರದಲ್ಲಿ ಪ್ರಕಟವಾಗಲಿದೆ. ಇದೇ 26 ರಿಂದ ಮೌಲ್ಯಮಾಪನ ಪ್ರಾರಂಭವಾಗಿ ಎರಡು ವಾರಗಳ ಕಾಲ ನಡೆಯಲಿದ್ದು, ಏಪ್ರಿಲ್ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪದವಿಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕರಾದ ಶಿಖಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ಸಾಲಿನ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ರ್ಯಾಂಡಮ್ ಹೈಜೇಷನ್ ಅಳವಡಿಸದಿರುವ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳನ್ನು ಬದಲಾಯಿಸುವ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಕೆ, ಅನಧಿಕೃತ ವ್ಯಕ್ತಿಗಳ ಪ್ರವೇಶ ನಿರ್ಬಂಧ, ಪ್ರಶ್ನೆ ಪತ್ರಿಕೆ ವಿತರಣಾ ವಾಹನಗಳಿಗೆ ಜಿಪಿಎಸ್ ಅಳವಡಿಕೆ ಮುಂತಾದ ಕ್ರಮ ಕೈಗೊಳ್ಳಲಾಗಿತ್ತು ಎಂದು ಹೇಳಿದರು. 26 ರಿಂದ ಮೌಲ್ಯಮಾಪನ ಆರಂಭವಾಗಲಿದೆ. ಮೌಲ್ಯಮಾಪನ ಕಾರ್ಯಕ್ಕೆ 3779 ಉಪಮೌಲ್ಯಮಾಪಕರು, 20,111ಸಹಾಯಕ ಮೌಲ್ಯಮಾಪಕರು ಸೇರಿದಂತೆ 23,890 ಉಪನ್ಯಾಸಕರು ಮತ್ತು ಪ್ರಾಂಶುಪಾಲರಿಗೆ ಮೌಲ್ಯಮಾಪನ ನೇಮಕಾತಿ ಆದೇಶ ಕಳುಹಿಸಲಾಗಿದೆ ಎಂದು ಹೇಳಿದರು.

ದ್ವಿತೀಯ ಪಿಯು ಪೂರಕ ಪರೀಕ್ಷೆ ಮೇ ತಿಂಗಳ ಕೊನೆಯ ವಾರದಲ್ಲಿ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡ ನಂತರ ಸ್ಕ್ಯಾನ್ಡ್ ಕಾಪಿ ಪಡೆಯಲು ಹಾಗೂ ಮರುಮೌಲ್ಯಮಾಪನಕ್ಕೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು. ಈ ಬಾರಿ 1004 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ರಾಜ್ಯದ 4,725 ಕಾಲೇಜುಗಳ 6,90,150 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಬಾರಿ ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದವರು ಕೇವಲ 16 ಮಂದಿ ಮಾತ್ರ ಎಂದು ಹೇಳಿದರು.

Leave a Reply