ದೇವೇಗೌಡರ ನಿವಾಸದಲ್ಲಿ ಆಸ್ಟ್ರೇಲಿಯಾದ ಉಪಕೌನ್ಸಲೇಟ್ ಜನರಲ್

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಇಂದು ಬೆಳಗ್ಗೆ ಆಸ್ಟ್ರೇಲಿಯಾದ ಉಪಕೌನ್ಸಲೇಟ್ ಜನರಲ್ ಜಾನ್ ಬೋನರ್ ಭೇಟಿ ಮಾಡಿ ಮಾತುಕತೆ ನಡೆಸಿದರು. ಪದ್ಮನಾಭನಗರದ ನಿವಾಸದಲ್ಲಿ ಗೌಡರನ್ನು ಭೇಟಿಯಾದ ಬೋನರ್ ಪ್ರಚಲಿತ ರಾಜಕೀಯ ವಿದ್ಯಮಾನ, ಭಾರತ ಮತ್ತು ಆಸ್ಟ್ರೇಲಿಯಾ ಸಂಬಂಧ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ದೇವೇಗೌಡರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬೋನರ್, ದೇವೇಗೌಡರು ಪ್ರಧಾನಿಯಾಗಿದ್ದ ತುಂಬಾ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಆಸ್ಟ್ರೇಲಿಯಾ ಮತ್ತು ಭಾರತಗಳೆರಡೂ ಪ್ರಜಾಪ್ರಭುತ್ವ ರಾಷ್ಟ್ರಗಳಿದ್ದು, ಹಲವು ವಿಚಾರಗಳ ಬಗ್ಗೆ ಗೌಡರೊಂದಿಗೆ ಚರ್ಚೆ ಮಾಡಿರುವುದಾಗಿ ತಿಳಿಸಿದರು. ಕರ್ನಾಟಕ ಇತ್ತೀಚಿನ ದಿನಗಳಲ್ಲಿ ಭ್ರಷ್ಟಾಚಾರದಿಂದ ಬಳಲುತ್ತಿರುವ ಬಗ್ಗೆಯೂ ಮಾತುಕತೆ ನಡೆಸಿದ್ದೇವೆ. ಕರ್ನಾಟಕದ ಜನರ ಬಗ್ಗೆ ದೇವೇಗೌಡರು ಅಪಾರ ಅಭಿಮಾನ ಹೊಂದಿದ್ದಾರೆ. ಜೊತೆಗೆ ಕಾವೇರಿ ವಿವಾದ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಗೌಡರು ಕೈಗೊಂಡಿರುವ ಹೋರಾಟದ ಬಗ್ಗೆಯೂ ಸಮಾಲೋಚನೆ ನಡೆಸಲಾಯಿತು ಎಂದು ಹೇಳಿದರು.

Devegowda--01

ಕೃಪೆ : ಈ ಸಂಜೆ

 

Leave a Reply