ನಿಮ್ಮನ್ನು ಜ್ವರದ ಭೀತಿ ಕಾಡುತಿದೆಯೇ….ಎಚ್ಚರ!!

‘ಮಲೇರಿಯಾ ಸೋಲಿಸಲು ಸಿದ್ಧರಾಗಿ’ ಎಂಬ ಘೋಷವಾಕ್ಯದಡಿ ಈ ವರ್ಷ ವಿಶ್ವ ಮಲೇರಿಯಾ ದಿನ ಆಚರಿಸಲಾಗುತ್ತಿದೆ. ಒಡಿಶಾ, ಮಧ್ಯಪ್ರದೇಶ ಸೇರಿದಂತೆ ಉತ್ತರದ ರಾಜ್ಯಗಳಲ್ಲಿ ಅಧಿಕ ಪ್ರಮಾಣದಲ್ಲಿ ಮಲೇರಿಯಾ ಪ್ರಕರಣಗಳು ಪತ್ತೆಯಾಗುತ್ತಿವೆ. ಹಾಗಾಗಿ, ರಾಜ್ಯಕ್ಕೆ ಉದ್ಯೋಗ ಅರಸಿ ಬಂದವರಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಪರೀಕ್ಷೆ ನಡೆಸಲಾಗುತ್ತಿದೆ. ರಾಜ್ಯದ ಅಸುರಕ್ಷಿತ ಪ್ರದೇಶಗಳಲ್ಲಿ 4 ಲಕ್ಷ ಸೊಳ್ಳೆ ಪರದೆಗಳನ್ನು ಉಚಿತವಾಗಿ ವಿತರಿಸಲಾಗಿದೆ.

ಮಲೇರಿಯಾ ಜ್ವರ ಪ್ಲಾಸ್ಮೋಡಿಯಂ ವೈವಾಕ್ಸ್ ಹಾಗು ಪ್ಲಾಸ್ಮೋಡಿಯಂ ಫಾಲ್ಸಿಫಾರಂ ಎಂಬ ವೈರಾಣುವಿನಿಂದ ಬರುತ್ತಿದ್ದು ಅನಾಫಿಲಿಸ್ ಎಂಬ ಹೆಣ್ಣು ಸೊಳ್ಳೆಯಿಂದ ಹರಡುತ್ತಿದೆ. ವೀಪರೀತ ಜ್ವರ, ಮೈ ಬೆವರುವುದು, ವಾಂತಿ, ಮೈ ಕೈ ನೋವು, ನಿಶ್ಯಕ್ತಿ ಮಲೇರಿಯಾ ರೋಗದ ಪ್ರಮುಖ ಲಕ್ಷಣಗಳಾಗಿವೆ. ರೋಗವನ್ನು ತಡೆಗಟ್ಟಲು ಮನೆ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸುವುದು ಅಗತ್ಯ. ರಾತ್ರಿ ಮಲಗುವಾಗ ಸೊಳ್ಳೆ ಪರದೆ ಬಳಸುವುದು, ಸೊಳ್ಳೆ ಕಡಿತಕ್ಕೆ ಒಳಗಾಗದಂತೆ ಜಾಗೃತಿ ವಹಿಸುವುದು, ಜ್ವರ ಕಾಣಿಸಿಕೊಂಡಾಗ ರಕ್ತ ಪರೀಕ್ಷೆ ಮಾಡಿಸಿಕೊಳ್ಳುವುದು ಅನಿವಾರ್ಯವಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಯಾದಗಿರಿ, ಬೆಂಗಳೂರು, ಬಾಗಲಕೋಟೆ, ಗದಗ, ಹುಬ್ಬಳ್ಳಿ-ಧಾರವಾಡ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಪ್ರತಿವರ್ಷ ಅಧಿಕ ಮಲೇರಿಯಾ ಪ್ರಕರಣಗಳು ಪತ್ತೆಯಾಗುತ್ತಿವೆ. ದಕ್ಷಿಣ ಕನ್ನಡವೊಂದರಲ್ಲೇ ಕಳೆದ ವರ್ಷ 4,741 ಪ್ರಕರಣಗಳು ಪತ್ತೆಯಾಗಿದ್ದವು. ಈ ವರ್ಷ ಮೊದಲ 3 ತಿಂಗಳಲ್ಲಿ 688 ಪ್ರಕರಣ ಬೆಳಕಿಗೆ ಬಂದಿವೆ. ಸೋಲಾರ್ ಪಾರ್ಕ್, ಗಣಿ ಚಟುವಟಿಕೆ, ನದಿದಂಡೆ ಪ್ರದೇಶದಲ್ಲಿ ನೀರು ನಿಲ್ಲುವ ಕಾರಣ ಅನಾಫಿಲಿಸ್ ಸೊಳ್ಳೆ ಅಧಿಕ ಸಂಖ್ಯೆಯಲ್ಲಿ ಉತ್ಪತ್ತಿಯಾಗುತ್ತವೆ. ಸಾರ್ವಜನಿಕರು ನೈರ್ಮಲ್ಯಕ್ಕೆ ಆದ್ಯತೆ ನೀಡದಿದ್ದರೆ ಮಲೇರಿಯಾ ತೊಡೆದುಹಾಕಲು ಸಾಧ್ಯವಿಲ್ಲ.

Image result for anopheles mosquito

 

Leave a Reply