ಮೋದಿ ಸರಕಾರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಿಎಂ ಕುಮಾರಸ್ವಾಮಿ.

ಕನ್ನಡದ ಸದಸ್ಯರಿಲ್ಲದ ಇಲ್ಲದ ಕಾವೇರಿ ನಿರ್ವಹಣಾ ಮಂಡಳಿ.

ಬೆಂಗಳೂರು: ರಾಜ್ಯ ಸರಕಾರವನ್ನು ವಿಶ್ವಾಸಕ್ಕೇ ತೆಗೆದುಕೊಳ್ಳದೇ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಿ ಅಧಿಸೂಚನೆ ಹೊರಡಿಸಿರುವ ಕೇಂದ್ರ ಸರಕಾರದ ವಿರುದ್ಧ ಮುಖ್ಯಮಂತ್ರಿ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾವೇರಿ ಮಂಡಳಿ ರಚನೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ನಮ್ಮ ಹಕ್ಕುಗಳನ್ನು ಕಿತ್ತುಕೊಳ್ಳಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು, ಈ ವಿಚಾರವಾಗಿ ಕೇಂದ್ರ ಸರಕಾರಕ್ಕೆ ಮತ್ತೊಮ್ಮೆ ಪತ್ರ ಬರೆಯುವುದಾಗಿ ಅವರು ಇಂದು ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ತಿಳಿಸಿದರು.

ನಿಯಮಗಳಿಗೆ ಆಕ್ಷೇಪ.

ಕಾವೇರಿನ ನಿರ್ವಹಣಾ ಮಂಡಳಿ ರಚನೆಗೆ ನಮ್ಮ ವಿರೋಧ ಇಲ್ಲ. ಆದರೆ ಅದರಲ್ಲಿನ ಕೆಲ ನಿಯಮಗಳಿಗೆ ನಮ್ಮ ಆಕ್ಷೇಪವಿದೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಜಲ ಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಲಾಗಿದೆ ಎಂದರು. ಜಲ ವಿವಾದಗಳನ್ನು ನಿರ್ವಹಿಸಲು ನೀರಾವರಿ ತಜ್ಞರನ್ನು ನೇಮಕ ಮಾಡಿಕೊಂಡಿದ್ದೇನೆ. ಅವರು ವಿಷಯದ ಕುರಿತು ಅಧ್ಯಯನ ಮಾಡುತ್ತಿದ್ದಾರೆ. ಅಡ್ವೊಕೇಟ್‌ ಜನರಲ್‌ ಅವರ ಸಭೆ ಕರೆದಿದ್ದು, ಚರ್ಚೆ ಮಾಡಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.

Leave a Reply