ನಿರುದ್ಯೋಗಿಗಳಿಗಾಗಿ ಸರ್ಕಾರದಿಂದ “ಕೆಂಪೇಗೌಡ ಸ್ಕಿಲ್ ಡೆವಲಪ್ಮೆಂಟ್ ಯೂನಿವರ್ಸಿಟಿ “.

ಕೆಂಪೇಗೌಡ ಜಯಂತಿಯಲ್ಲಿ ಮಹತ್ವದ ನಿರ್ಧಾರ.

ಬೆಂಗಳೂರಿನ ಒಂದು ವಿಶ್ವವಿದ್ಯಾನಿಲಯಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರಿಡಲು ನಿರ್ಧರಿಸಿದ್ದು, ಶೀಘ್ರವೇ ಈ ಸಂಬಂಧ ತೀರ್ಮಾನ ಕೈಗೊಳ್ಳುವಂತೆ ಮುಖ್ಯಮಂತ್ರಿ ಹೆಚ್.‌ಡಿ. ಕುಮಾರಸ್ವಾಮಿ ಅವರಿಗೆ ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್ ಇಂದಿಲ್ಲಿ ಮನವಿ ಮಾಡಿದರು.

ಪಠ್ಯದಲ್ಲಿ ಕೆಂಪೇಗೌಡರ ಇತಿಹಾಸ.

ಇದರ ಜತೆಗೆ ಕೆಂಪೇಗೌಡರ ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯ ಮಾಡಿಕೊಡಲು ಪಠ್ಯಪುಸ್ತಕಗಳಲ್ಲಿ ಸೇರಿಸುವುದು ಹಾಗೂ ಬೆಂಗಳೂರು ನಗರದಲ್ಲಿ ಕೆಂಪೇಗೌಡರ ಹೆಸರಲ್ಲಿ ಭವ್ಯ ಕಟ್ಟಡ ನಿರ್ಮಾಣ ಮಾಡಲು ಸರ್ಕಾರ ಮುಂದಾಗಬೇಕು ಎಂದು ಹೇಳಿದರು.

ರಾಜ್ಯ ಸರ್ಕಾರದ ವತಿಯಿಂದ ನಗರದ ಅರಮನೆ ಮೈದಾನದಲ್ಲಿಂದು ನಡೆದ ನಾಡಪ್ರಭು ಕೆಂಪೇಗೌಡರ 508ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಬೆಂಗಳೂರಿನ ಸುಮನಹಳ್ಳಿ ಬಳಿ 5 ಎಕರೆ ಜಾಗ ಮೀಸಲಿಟ್ಟಿದ್ದು, ಇದರ ಅಭಿವೃದ್ಧಿಗೆ ಹಣಕಾಸು ನೆರವು ನೀಡುವಂತೆ ಮನವಿ ಮಾಡಿದರು.

ನಿರುದ್ಯೋಗ ನಿವಾರಿಸಲು ಕೆಂಪೇಗೌಡ ಸ್ಕಿಲ್ ಡೆವಲಪ್ಮೆಂಟ್ ಯೂನಿವರ್ಸಿಟಿ.

ಬೆಂಗಳೂರಿನ ಮೂರು ವಿ.ವಿ.ಗಳ ಪೈಕಿ ಒಂದು ವಿವಿಗೆ ಕೆಂಪೇಗೌಡರ ಹೆಸರಿಡಲು ಹಿಂದಿನ ಸರ್ಕಾರ ನಿರ್ಧಾರ ಕೈಗೊಂಡಿತ್ತು. ಈ ಸಂಬಂಧ ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಕೆಂಪೇಗೌಡರ ಜಯಂತಿಯನ್ನು ಬೆಂಗಳೂರಿನಲ್ಲಷ್ಟೇ ಆಚರಿಸುತ್ತಿಲ್ಲ ರಾಜ್ಯದ ಪ್ರತಿ ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರಗಳಲ್ಲೂ ಆಚರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಕೆಂಪೇಗೌಡರು ಒಂದು ಜಾತಿ, ಸಮುದಾಯ, ಧರ್ಮಕ್ಕೆ ಸೇರಿದವರಲ್ಲ. ಇಡೀ ರಾಜ್ಯದ ಆಸ್ತಿ ಎಂದರು.

ಕೆಂಪೇಗೌಡರ ಚಿಂತನೆಗಳು, ಆಡಳಿತ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸ ಮಾಡುವ ಅಗತ್ಯವಿದೆ ಎಂದರು.

ಬೆಂಗಳೂರು ವಿಶ್ವಮಟ್ಟದಲ್ಲಿ ಹೆಸರುಗಳಿಸಿದ್ದರೆ ಅದಕ್ಕೆ ಕೆಂಪೇಗೌಡರ ಕೊಡುಗೆ ಅಪಾರ ಎಂದು ಅವರು ಹೇಳಿದರು.

ಕೆಂಪೇಗೌಡರ ಅಭಿವೃದ್ಧಿ ಪ್ರಾಧಿಕಾರವನ್ನು ರಾಜ್ಯ ಸರ್ಕಾರ ಪ್ರಾರಂಭಿಸುವ ಮೂಲಕ ಕೆಂಪೇಗೌಡರ ಆಡಳಿತ, ಅಭಿವೃದ್ಧಿ, ಚಿಂತನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಮತ್ತಷ್ಟು ಕೆಲಸ ಮಾಡುವ ಅಗತ್ಯವಿದೆ ಎಂದರು.

ನಾಡಪ್ರಭು ಕೆಂಪೇಗೌಡರ ದೂರದೃಷ್ಠಿಯಿಂದಾಗಿ ಬೆಂಗಳೂರು ವಿಶ್ವಮಟ್ಟದಲ್ಲಿ ಹೆಸರುಗಳಿಸಿದೆ ಎಂದು ಅವರು ಹೇಳಿದರು.

ಮುಂದಿನ ದಿನಗಳಲ್ಲಿ ಬೆಂಗಳೂರು ನಗರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಿರ್ಧಾರ ಕೈಗೊಂಡಿದ್ದಾರೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿಗಳಿಂದ ಉದ್ಘಾಟನೆ.

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿಯ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ನಂಜಾವಧೂತ ಸ್ವಾಮೀಜಿ, ಸಚಿವರಾದ ಜಯಮಾಲ, ಕೃಷ್ಣಭೈರೇಗೌಡ, ಮೇಯರ್ ಸಂಪತ್‌ರಾಜ್, ಶಾಸಕರಾದ ಎಸ್.ಟಿ. ಸೋಮಶೇಖರ್, ಗೋವಿಂದರಾಜು, ಒಕ್ಕಲಿಗರ ಸಂಘದ ಅಧ್ಯಕ್ಷ ಬೆಟ್ಟೇಗೌಡ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Leave a Reply