ಬೇಜವಾಬ್ದಾರಿ ಕೇಂದ್ರ ಸರ್ಕಾರದ ವಿರುದ್ಧ ಎಚ್ ಡಿಕೆ ಗರಂ

ಕೇಂದ್ರ ಸರಕಾರದ ಬೇಜವಾಬ್ದಾರಿತನದಿಂದ ಕರ್ನಾಟಕದ ಜನತೆಗೆ ಕತ್ತಲಲ್ಲಿ ಕಾಲ ಕಳೆಯಬೇಕಾದಂತ  ಪರಿಸ್ಥಿತಿ ಎದುರಾಗುವಂತಿದೆ. ಹೌದು, ರಾಜ್ಯದಲ್ಲಿ ಉಷ್ಣ ವಿದ್ಯುತ್ತ್ಉತ್ಪಾದನಾ ಘಟಕಗಳಿಗೆ ಕಲ್ಲಿದ್ದಲಿನ ತೀವ್ರ ಕೊರತೆ ಉಂಟಾಗಿದೆ. ರಾಜ್ಯದ ಮೂರು ಉಷ್ಣ ವಿದ್ಯುತ್ ಸ್ಥಾವರಗಳಿಗೆ ಅಗತ್ಯವಿರುವ ಅರ್ಧದಷ್ಟು ಕಲ್ಲಿದ್ದಲಿನೂ ಕೇಂದ್ರ ಸರ್ಕಾರ ಪೂರೈಸುತ್ತಿಲ್ಲ.

ಅಲ್ಲದೆ ಪ್ರತಿ ಘಟಕದಲ್ಲೂ 15 ದಿನಗಳಿಗೆ ಅಗತ್ಯವಾದ ಕಲ್ಲಿದ್ದಲು ಶೇಖರಣಾ 15 ದಿನಗಳಿಗೆ ಅಗತ್ಯವಾದ ಕಲ್ಲಿದ್ದಲು ಶೇಖರಣೆ ಇರಬೇಕು ಎಂಬ ನಿಯಮವಿದೆ. ಆದರೂ ಕೇಂದ್ರ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ರಾಜ್ಯ ಸರ್ಕಾರ ಅಸಮಾಧಾನ ವ್ಯಕ್ತ ಪಡಿಸಿದೆ.

ಈ ಬಗ್ಗೆ ಗರಂ ಆಗಿರುವ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರವು ಕೇಂದ್ರ ಕಲ್ಲಿದ್ದಲು ಸಚಿವ ಪೀಯೂಷ್ ಗೋಯೆಲ್ ಹಾಗು ಕೇಂದ್ರ ಸರ್ಕಾರಕ್ಕೆ ಸತತವಾಗಿ ಮನವಿ ಮಾಡುತ್ತಿದ್ದರೂ ಕಲ್ಲಿದ್ದಲು ಪೂರೈಕೆ ಮಾಡುತ್ತಿಲ್ಲ, ಪರಿಸ್ಥಿತಿ ಇದೆ ರೀತಿ ಮುಂದುವರೆದರೆ ಯಾವುದೇ ಕ್ಷಣದಲ್ಲೂ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

 

Leave a Reply