ಮಾಜಿ ಪ್ರಧಾನಿ ದೇವೇಗೌಡರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಶ್ರಮಿಸಿದವರಿಗೆ ನೀಡಲಾಗುವ ಪ್ರತಿಷ್ಠಿತ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಈ ಬಾರಿ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರನ್ನು ರಾಜ್ಯ ಸರಕಾರ ಆಯ್ಕೆ ಮಾಡಿದೆ.

ರಾಜ್ಯ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಅವರ ಅಧ್ಯಕ್ಷತೆಯಲ್ಲಿ ಸರಕಾರ ನೇಮಿಸಿದ್ದ ಸಮಿತಿ ಶಿಫಾರಸಿನಂತೆ ಸರಕಾರ ಈ ಪ್ರಶಸ್ತಿಯನ್ನು ಎಚ್‌.ಡಿ.ದೇವೇಗೌಡ ಅವರಿಗೆ ನೀಡಿ ಗೌರವಿಸಲು ನಿರ್ಧರಿಸಿದೆ.


ಸಮಾಜ ಕಲ್ಯಾಣ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಇಂದು ಎಚ್.ಡಿ.ದೇವೇಗೌಡ ಅವರನ್ನು ಪದ್ಮನಾಭನಗರದ ಅವರ ನಿವಾಸದಲ್ಲಿ ಭೇಟಿ ಮಾಡಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಮಿಸಿ, ಪ್ರಶಸ್ತಿ ಸ್ವೀಕರಿಸುವಂತೆ ಮನವಿ ಮಾಡಿದರು.

ನಾಳೆ (ಅ.24ರಂದು) ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ತಂದೆ ದೇವೇಗೌಡರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ

Leave a Reply