ಮಾಜಿ ಶಾಸಕ ಎಂ.ಪಿ ರವೀಂದ್ರ ನಿಧನ : ತೀವ್ರ ಸಂತಾಪ ವ್ಯಕ್ತಪಡಿಸಿದ ಎಚ್. ಡಿ ಕುಮಾರಸ್ವಾಮಿ

ಬಹುಅಂಗಗಳ ವೈಫಲ್ಯದಿಂದ ನರಳುತ್ತಿದ್ದ ಹರಪ್ಪನಹಳ್ಳಿ ಮಾಜಿ ಶಾಸಕ ಎಂ.ಪಿ ರವೀಂದ್ರ ಇಂದು ಮುಂಜಾನೆ ದೈವಾಧೀನರಾದರು. ರವೀಂದ್ರ ಅವರು ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ ಪ್ರಕಾಶ್ ಅವರ ಏಕೈಕ ಪುತ್ರ. ಕಳೆದ 2013 ರಲ್ಲಿ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ ಅರೋಗ್ಯ ಸಮಸ್ಯೆಯಿಂದ ರವೀಂದ್ರ ಅವರು ರಾಜಕೀಯ ನಿವೃತ್ತಿ ಪಡೆದಿದ್ದರು. ಬಹುಅಂಗಗಳ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳ್ಳಗೆ ಸಾವನ್ನಪ್ಪಿದ್ದಾರೆ.
ಇದರ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸಂದೇಶದ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
ರವೀಂದ್ರ ಅವರು ವೈಯಕ್ತಿಕವಾಗಿ ನನ್ನ ಉತ್ತಮ ಸ್ನೇಹಿತರು. ಸಮಾಜದ ಬಗ್ಗೆ ಕಳಕಳಿ ಹೊಂದಿದ್ದರು. ಇವರ ನಿಧನದಿಂದ ಒಬ್ಬ ಉತ್ತಮ ಸ್ನೇಹಿತನನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುವುದಾಗಿ ತಮ್ಮ ಶೋಕ ತಿಳಿಸಿದ್ದಾರೆ.

Leave a Reply