ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಕುಮಾರಸ್ವಾಮಿ

ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗುವ ಉದ್ದೇಶದಿಂದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ನಲ್ಲಿ ಘೋಷಿಸಿದ್ದ ‘ಬಡವರ ಬಂಧು’ ಯೋಜನೆಗೆ ಚಾಲನೆ ನೀಡಲು ಸಿದ್ಧತೆ ನಡೆಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ 53 ಸಾವಿರ ಬೀದಿ ಬದಿ ವ್ಯಾಪಾರಿಗಳಿಗೆ ಕಿರು ಸಾಲ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, 10 ಮಹಾನಗರ ಪಾಲಿಕೆ ಹಾಗೂ 18 ನಗರ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಸೇವೆ ಮತ್ತು ಸಾಲದ ವ್ಯವಸ್ಥೆ ಕಲ್ಪಿಸುವ ಯೋಜನೆಯ ರೂಪುರೇಷೆ ಸಿದ್ಧವಾಗಿದೆ.

ಅರ್ಹ ಫಲಾನುಭವಿಗಳಿಗೆ 2000 ದಿಂದ 10 ಸಾವಿರ ರೂ. ಗಳವರೆಗೆ ಮೂರು ತಿಂಗಳ ಅವಧಿಗೆ ಶೇಕಡಾ 4 ರ ಬಡ್ಡಿ ದರದಲ್ಲಿ ಸಾಲ ವಿತರಿಸಲು ಉದ್ದೇಶಿಸಲಾಗಿದ್ದು, ಶೀಘ್ರದಲ್ಲೇ ಯೋಜನೆ ಅನುಷ್ಠಾನಗೊಳ್ಳಲಿದ್ದು, ಬೀದಿಬದಿ ವ್ಯಾಪಾರಿಗಳಿಗೆ ಇದರಿಂದ ಅನುಕೂಲವಾಗಲಿದೆ

Leave a Reply