ಬಡವರ ಬಂಧು ಯೋಜನೆ : ಕುಮಾರಸ್ವಾಮಿ ಅವರ ಜನಪರ ಯೋಜನೆಗಳ ಪಟ್ಟಿಗೆ ಮತ್ತೊಂದು ಮಹತ್ವದ ಯೋಜನೆಯ ಸೇರ್ಪಡೆ

ಅಧಿಕಾರಕ್ಕೆ ಬಂದು ಕೇವಲ ಐದೇ ತಿಂಗಳಾಗಿದ್ದರು, ಕುಮಾರಸ್ವಾಮಿ ಅವರು ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದು, ರಾಜ್ಯದ ಜನತೆಯಿಂದ ಮೆಚ್ಚುಗೆ ಗಳಿಸುತ್ತಿದ್ದಾರೆ. ರೈತರ ಸಾಲ ಮನ್ನಾ, ಮಾತೃಶ್ರೀ ಯೋಜನೆಗಳಂತ ಸಾಲು ಸಾಲು ಜನಪರ ಕ್ರಿಯಾಶೀಲ ಯೋಜನೆಗಳನ್ನು ಜಾರಿಗೆ ತರುತ್ತಿರುವ ಹಿನ್ನಲೆಯಲ್ಲೇ ಕುಮಾರಸ್ವಾಮಿ ಅವರ ಮುಂದಾಳತ್ವದ ರಾಜ್ಯ ಸರ್ಕಾರ ಮತ್ತೊಂದು ಯೋಜನೆಗೆ ಇಂದು( ಗುರುವಾರ ) ಚಾಲನೆ ನೀಡಲಾಗುತ್ತದೆ. ಅದೆ ಬಡವರ ಬಂಧು ಯೋಜನೆ.

ಏನಿದು ಬಡವರ ಬಂಧು ಯೋಜನೆ ?

‘ಬಡವರ ಬಂಧು’ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಯಾವುದೇ ಶೂರುಟಿ ಇಲ್ಲದೆ ಕಿರು ಸಾಲ ಒದಗಿಸುಲಾಗುತ್ತದೆ. ಯೋಜನೆಯಡಿ ಕನಿಷ್ಠ 2000 ರು.ನಿಂದ ಗರಿಷ್ಠ 10000 ರು.ವರೆಗೆ ಒಬ್ಬರಿಗೆ ಸಾಲ ನೀಡಲಾಗುತ್ತದೆ.

ಯೋಜನೆಯ ಪ್ರಮುಖ ಉದ್ದೇಶ

ಮೀಟರ್ ಬಡ್ಡಿ ದಂಧೆಕೋರರ ಕಪಿಮುಷ್ಠಿಯಿಂದ ಬೀದಿ ಬದಿ ವ್ಯಾಪಾರಿಗಳನ್ನು ರಕ್ಷಿಸವುದು ಈ ಯೋಜನೆಯ ಪ್ರಮುಖ ಉದ್ದೇಶ. ಖಾಸಗಿ ವ್ಯಕ್ತಿಗಳಿಂದ ದುಬಾರಿ ಬಡ್ಡಿ ದರದಲ್ಲಿ ಸಾಲ ಪಡೆಯುವುದನ್ನು ತಪ್ಪಿಸುವುದು ಮತ್ತು ಅವರಿಂದ ನಡೆಯುವ ಕಿರುಕುಳ ತಡೆಯುವುದರ ಜತೆಗೆ ಬೀದಿ ಬದಿ ವ್ಯಾಪಾರಿಗಳನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.

 

 

ಸಾಲ ಪಡೆಯುವುದು ಹೇಗೆ ?

ಕಿರುಸಾಲವನ್ನು ವಾರ್ಷಿಕ 50 ಸಾವಿರ ಫಲಾನುಭವಿಗಳಿಗೆ ನೀಡಲಾಗುವುದು. ಡಿಸಿಸಿ ಬ್ಯಾಂಕ್‌ಗಳು, ಪಟ್ಟಣ ಸಹಕಾರಿ ಬ್ಯಾಂಕ್‌ಗಳು, ಮಹಿಳಾ ಸಹಕಾರಿ ಬ್ಯಾಂಕ್‌ಗಳು ಶೂನ್ಯ ಬಡ್ಡಿದರದಲ್ಲಿ ಕಿರುಸಾಲವನ್ನು ನೀಡಲಿವೆ. ಫಲಾನುಭವಿಗಳನ್ನು ಗುರುತಿಸಲು ಬ್ಯಾಂಕ್‌ಗಳ ಸಿಬ್ಬಂದಿ ನಿಗದಿತ ಪ್ರದೇಶ, ಮಾರುಕಟ್ಟೆಗಳಲ್ಲಿ ಮೊಬೈಲ್‌ ವ್ಯಾನ್‌ಗಳ ಮೂಲಕ ಹಾಜರಿರುತ್ತಾರೆ. ನಿಗದಿತ ಅರ್ಜಿ ಸಲ್ಲಿಸುವ ಮೂಲಕ ಅಲ್ಲಿ ನೋಂದಾಯಿಸಿಕೊಂಡು ಸಾಲ ಪಡೆದುಕೊಳ್ಳಬಹುದಾಗಿದೆ.

ಸಾಲ ಮರುಪಾವತಿ ನಿಯಮಗಳು

ಸಾಲ ಪಡೆದ ಫಲಾನುಭವಿಗಳಿಗೆ ಅದನ್ನು ಮರುಪಾವತಿ ಮಾಡಲು ಮೂರು ತಿಂಗಳ ಸಮಯಾವಕಾಶ ಇರುತ್ತದೆ. ಪ್ರತಿದಿನ ಫಲಾನುಭವಿಗಳು ಕನಿಷ್ಠ 100 ರು.ನಿಂದ ಅನುಕೂಲಕ್ಕೆ ತಕ್ಕಂತೆ ಸಾಲವನ್ನು ಮರುಪಾವತಿ ಮಾಡಬಹುದಾಗಿದೆ.

ಈ ಎಲ್ಲಾ ವ್ಯಾಪಾರಿಗಳಿಗೆ ಸಾಲ ಇಲ್ಲ

ರಸ್ತೆ ಬದಿಯಲ್ಲಿ ಸ್ವಚ್ಛತೆ ಹಾಳು ಮಾಡುವ, ಪರಿಸರಕ್ಕೆ ಹಾನಿ ಆಗುವಂತಹಾ ವಸ್ತುಗಳನ್ನು ಮಾರಾಟ ಮಾಡುವ ವ್ಯಾಪಾರಿಗಳು ಈ ಯೋಜನೆಯ ವ್ಯಾಪ್ತಿಯಿಂದ ಹೊರಗುಳಿಯಲಿದ್ದಾರೆ. ಯೋಜನೆಯ ಫಲಾನುಭವ ಪಡೆಯಲು ಕಡ್ಡಾಯವಾಗಿ ಬಿಪಿಎಲ್ ಕಾರ್ಡ್‌ ಹೊಂದಿರಬೇಕು ಮತ್ತು ನೊಂದಾಯಿತಿ ಬೀದಿ ಬದಿ ವ್ಯಾಪಾರಿಗಳಾಗಿರಬೇಕು.

 

ಯಶವಂತಪುರದಲ್ಲಿ ಚಾಲನೆ 

ಯಶವಂತಪುರದಲ್ಲಿನ ಎಪಿಎಂಸಿ ಮಾರುಕಟ್ಟೆಯಾರ್ಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಡವರ ಬಂಧು ಯೋಜನೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಯೋಜನೆಯ ಸಂಚಾರಿ ಸೇವಾ ವಾಹನಕ್ಕೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್‌ ಚಾಲನೆ ನೀಡಲಿದ್ದಾರೆ. ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ನಿರ್ಮಲಾ ಸೀತಾರಾಮನ್‌, ವಿಧಾನಸಭೆ ಅಧ್ಯಕ್ಷ ರಮೇಶ್‌ ಕುಮಾರ್‌, ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಡಿ.ಕೆ.ಶಿವಕುಮಾರ್‌, ಕೆ.ಜೆ.ಜಾಜ್‌ರ್‍ ಇತರರು ಭಾಗವಹಿಸಲಿದ್ದಾರೆ.

 

Leave a Reply