ರಾಜ್ಯದ ಜನತೆಯ 22 ವರ್ಷಗಳ ಕನಸನ್ನು ನನಸು ಮಾಡಿದ ಎಚ್.ಡಿ ಕುಮಾರಸ್ವಾಮಿ….!

ತಮಿಳು ನಾಡು ಸರ್ಕಾರಕ್ಕೂ ಕರ್ನಾಟಕ ರಾಜ್ಯ ಸರ್ಕಾರಕ್ಕೂ ನೀರಿನ ವಿಷ್ಯದಲ್ಲಿ ಜಟಾಪಟಿ ಹೊಸದೇನಲ್ಲ. ಎರಡು ರಾಜ್ಯಗಳು ಹೊತ್ತಿ ಉರಿಯುವ ಮಟ್ಟಿಗೆ ದ್ವೇಷ ಬೆಳೆದಿದೆ. ಹಠ ಬಿಡದ ಅವರ ಮುಂದೆ ಛಲ ಬಿಡದ ನಾವು ಸೋಲುವ ಪ್ರಶ್ನೆ ಇಲ್ಲವೇ ಇಲ್ಲ. ಇದೇ ರೀತಿ ಮೇಕೆದಾಟಿನಲ್ಲಿ ಕಿರು ಆಣೆಕಟ್ಟು ನಿರ್ಮಿಸುವ    ಯೋಜನೆಯಲ್ಲಿ ಎರಡು ರಾಜ್ಯಕ್ಕೂ ತಕರಾರಿದೆ. ಆದರೆ ಈಗ ಮೇಕೆದಾಟು ಯೋಜನೆಗೆ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದಿಂದ  ರಾಜ್ಯದ ಮಹತ್ವಾಕಾಂಕ್ಷಿ ಪ್ರಾಥಮಿಕ ಹಂತದ ಅನುಮತಿ ಪಡೆದುಕೊಂಡಿರುವುದು ಕನ್ನಡಿಗರ ಮನದಲ್ಲಿ  ಸಂತಸ ಮೂಡಿಸಿದೆ.

ಮೇಕೆದಾಟು ಏನು..?
ಮೇಕೆದಾಟು ಎಂದರೇನು ಎಂದು ಕೇಳಿದರೆ ಸಿಗುವ ಉತ್ತರ ಪಿಕ್ನಿಕ್ ಸ್ಪಾಟ್. ಬೆಂಗಳೂರಿನಿಂದ 90 ಕಿ.ಮೀ ದೂರದ ರಾಮನಗರ ಜಿಲ್ಲೆಯಲ್ಲಿರುವ ಸ್ಥಳವೇ ಮೇಕೆದಾಟು. ಕಾವೇರಿ ಮತ್ತು ಅರ್ಕಾವತಿ ನದಿಗಳ ಸಂಗಮ ಸ್ಥಳದಿಂದ 4 ಕಿಲೋಮೀಟರ್ ದೂರದಲ್ಲಿದೆ ಮೇಕೆದಾಟು. ಇಲ್ಲಿ ಕಾವೇರಿ ನದಿ ಮೇಕೆ ಹಾರಿ ದಾಟುವಷ್ಟು ಕಿರು ಜಾಗದಲ್ಲಿ ಹರಿದು ಆಳವಾದ ಕಂದಕಕ್ಕೆ ಧುಮುಕುತ್ತದೆ.

 

 

ಏನಿದು ಮೇಕೆದಾಟು ಯೋಜನೆ?
ಮೇಕೆದಾಟು ಬಳಿ ಕುಡಿಯುವ ನೀರಿನ ಯೋಜನೆಗಾಗಿ ಕಾವೇರಿ ನದಿಗೆ ಅಡ್ಡಲಾಗಿ ಕಿರು ಅಣೆಕಟ್ಟು ಕಟ್ಟಲು ಕರ್ನಾಟಕ ಸರ್ಕಾರ ಮುಂದಾಗಿದೆ. ಕಾವೇರಿ ನದಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ಬಾರಿಯೂ ಕ್ಯಾತೆ ತೆಗೆಯುವ ತಮಿಳುನಾಡು ಈಗ ಮತ್ತೆ ಅಣೆಕಟ್ಟು ನಿರ್ಮಾಣ ಮಾಡುವುದನ್ನು ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮಿಳು ನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಪತ್ರ ಬರೆದಿದ್ದಾರು. ಅಷ್ಟೇ ಅಲ್ಲದೇ ಸುಪ್ರೀಂ ಕೋರ್ಟ್‍ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿ ಈ ಯೋಜನೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿದ್ದರು.

ಕರ್ನಾಟಕ ಸರ್ಕಾರ ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಿಸಲು ಹೊರಟ್ಟಿದ್ದು ಯಾಕೆ?
ಕಾವೇರಿ ನ್ಯಾಯಾಧೀಕರಣ ತೀರ್ಪಿನಂತೆ ಕರ್ನಾಟಕ ಸರ್ಕಾರ ಪ್ರತಿವರ್ಷ 177.3 ಟಿಎಂಸಿ ನೀರನ್ನು ತಮಿಳುನಾಡಿಗೆ ಮಂಡ್ಯದಲ್ಲಿರುವ ಕೃಷ್ಣರಾಜಸಾಗರ ಜಲಾಶಯದಿಂದ ಬಿಡುಗಡೆ ಮಾಡುಬೇಕು . ಆದರೆ ಕರ್ನಾಟಕದಿಂದ ಈಗಾಗಲೆ ಅದರ ದುಪ್ಪಟ್ಟು ಅಂದರೆ 310.6 ಟಿಎಂಸಿ ನೀರನ್ನು ಕೇವಲ ಮೂರು ತಿಂಗಳಲ್ಲಿ ಬಿಡುಗಡೆ ಆಗಿದೆ. ಹೀಗೆ ಸುಮಾರು 250 ಟಿಎಂಸಿಗು ಹೆಚ್ಚು ನೀರು ಸಮುದ್ರದ ಪಾಲಾಗುತ್ತಿದೆ. ಆದರೆ ಮೇಕೆದಾಟಿನಲ್ಲಿ ಈ ಕಿರು ಅಣೆಕಟ್ಟಿನಿಂದ ಸುಮಾರು 70 ಟಿಎಂಸಿ ನೀರನ್ನಾದರೂ ಸಂಗ್ರಹಿಸಿ ಬೆಂಗಳೂರು ನಗರಕ್ಕೆ ಪೂರೈಕೆ ಮಾಡಲು ಕರ್ನಾಟಕ ಸರ್ಕಾರ ಈ ಯೋಜನೆಗೆ ಇಷ್ಟು ಪ್ರಾಮುಖ್ಯತೆ ನೀಡುತ್ತಿದೆ.

ತಮಿಳುನಾಡು ವಾದ ಏನು?
ಕಾವೇರಿ ನ್ಯಾಯಾಧೀಕರಣದಲ್ಲಿ ನೀರು ಹಂಚಿಕೆ ವಿಚಾರಣೆ ನಡೆಯುವ ವೇಳೆ ಮೇಕೆದಾಟು ವಿಚಾರ ಪ್ರಸ್ತಾಪವಾಗಿಲ್ಲ. ಆದರೆ ಸರ್ಕಾರ ಈಗ ಯೋಜನೆ ಮುಂದಾಗಿದ್ದು ನ್ಯಾಯಾಮಂಡಳಿಯ ತೀರ್ಪನ್ನು ಉಲ್ಲಂಘಿಸಿದೆ. ತಮಿಳುನಾಡಿಗೆ ನೈಸರ್ಗಿಕವಾಗಿಯೇ ಮಳೆ ಮೂಲಕ ಹೆಚ್ಚುವರಿ ನೀರು ಬರುತ್ತದೆ. ಅದರೆ ಈ ಅಣೆಕಟ್ಟು ನಿರ್ಮಿಸುವ ಮೂಲಕ ಕರ್ನಾಟಕ ತಮಿಳುನಾಡಿನ ರೈತರ ಕೃಷಿಗೆ ಅಡ್ಡಗಾಲು ಹಾಕುತ್ತಿದೆ.

 

 

ಕರ್ನಾಟಕದ ವಾದ ಏನು?
ಕಾವೇರಿ ನ್ಯಾಯಾಧೀಕರಣದ ತೀರ್ಪಿನ ಪ್ರಕಾರ ಪ್ರತಿವರ್ಷ 177.3 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡುವುದು ನಮ್ಮ ಹೊಣೆ. ಒಂದು ವೇಳೆ ನಾವು ಅಷ್ಟು ಪ್ರಮಾಣದ ನೀರನ್ನು ಬಿಡದಿದ್ದರೆ ತಮಿಳುನಾಡು ಪ್ರಶ್ನಿಸುವುದು ಸರಿ. ನಾವು ಕುಡಿಯುವ ನೀರಿಗಾಗಿ ಡ್ಯಾಂ ಕಟ್ಟುತ್ತೇವೆಯೇ ಹೊರತು ವಿದ್ಯುತ್ ಉತ್ಪಾದನೆಗೆ ಅಲ್ಲಾ. ನದಿ ನೀರಿನ ಹಂಚಿಕೆ ವಿಚಾರದಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕೆಂದು ಎಂದು ಅಂತಾರಾಷ್ಟ್ರೀಯ ಜಲ ನೀತಿಯೇ ಹೇಳಿದೆ. ಹೀಗಾಗಿ ನಾವು ಕೈಗೊಂಡಿರುವ ಮೇಕೆದಾಟು ಯೋಜನೆ ನ್ಯಾಯ ಸಮ್ಮತವಾಗಿದೆ.

ಕರ್ನಾಟಕಕ್ಕೆ ಈ ಅಣೆಕಟ್ಟು ಅಗತ್ಯ ಯಾಕೆ?
ಬೆಂಗಳೂರು ನಗರಕ್ಕೆ ನೀರು ಬರುವುದು ಕೆಆರ್‍ಎಸ್ ಡ್ಯಾಂನಿಂದ. ಮಳೆಗಾಲದಲ್ಲಿ ಡ್ಯಾಂ ಭರ್ತಿಯಾದರೆ ಬೆಂಗಳೂರು ಜನತೆಗೆ ನೀರು ಭಾಗ್ಯ. ಬೆಂಗಳೂರು ನಗರಕ್ಕೆ ಪ್ರತಿದಿನ 1450 ದಶಲಕ್ಷ ಲೀಟರ್‍ನ ಅಗತ್ಯವಿದೆ. ಬೇಸಿಗೆ ಸಮಯದಲ್ಲಿ ನೀರಿನ ಬೇಡಿಕೆ ಶೇ.15ರಷ್ಟು ಹೆಚ್ಚಾಗುತ್ತದೆ. ತಿಪ್ಪಗೊಂಡನಹಳ್ಳಿ ಜಲಾಶಯದಿಂದ 2012ರಲ್ಲಿ ನೀರು ಪಂಪಿಂಗ್ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಬೆಂಗಳೂರಿನ ನೀರಿನ ಬೇಡಿಕೆ ಹೆಚ್ಚಾಗುತ್ತಿದೆ. ಹೀಗಾಗಿ ಇಲ್ಲಿ ಸಂಗ್ರಹವಾದ ಡ್ಯಾಂ ನೀರನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಯ ಕುಡಿಯುವ ನೀರಿನ ಯೋಜನೆಗೆ ಬಳಸುವ ಉದ್ದೇಶ ರಾಜ್ಯ ಸರ್ಕಾರದ್ದು.

ಛಲ ಬಿಡದ ಮುಖ್ಯಮಂತ್ರಿ…!

ಎಚ್.ಡಿ ಕುಮಾರಸ್ವಾಮಿ ಅವರು 2006ರಲ್ಲಿ  ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು, ಮೇಕೆದಾಟು ಆಣೆಕಟ್ಟು ಯೋಜನೆಯ ಬಗ್ಗೆ ಮಹತ್ವಾಕಾಂಕ್ಷೆಯನ್ನು ಇಟ್ಟುಕೊಂಡಿದ್ದರು. ಆದರೆ ಅದಕ್ಕೆ ಹೋರಾಡಲು ಅವರಿಗೆ ಸಮಯ ಸಾಲಲಿಲ್ಲ. ನಂತರ ಅಧಿಕಾರಕ್ಕೆ ಬಂದ ಯಾವ ನಾಯಕರು ಈ ವಿಷಯಕ್ಕೆ ತಲೆ ಕೂಡ ಹಾಕಲಿಲ್ಲ. ಈಗ ಕುಮಾರಸ್ವಾಮಿ ಅವರು ಮತ್ತೆ ಅಧಿಕಾರಕ್ಕೆ ಬಂದ ಕೂಡಲೇ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚಿಸಿ, ಆಣೆಕಟ್ಟು ನಿರ್ಮಾಣದಿಂದ ಆಗುವ ಉಪಯೋಗದ ಬಗ್ಗೆ ಅರಿವು ಮೂಡಿಸಿ, ಛಲ ಬಿಡದೆ ಆಣೆಕಟ್ಟು ಯೋಜನೆಗೆ ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ.

 

 

 

 

2 thoughts on “ರಾಜ್ಯದ ಜನತೆಯ 22 ವರ್ಷಗಳ ಕನಸನ್ನು ನನಸು ಮಾಡಿದ ಎಚ್.ಡಿ ಕುಮಾರಸ್ವಾಮಿ….!

  1. Gokul Yadav S says:

    Nice sir please do as soon as possible

Leave a Reply