ಮೋದಿ ಬೆಂಬಲ ನೀಡಲಿ ಬಿಡಲಿ ನಾನು ನನ್ನ ರೈತರಿಗೆ ಕೊಟ್ಟ ಮಾತಿನಂತೆ ಸಾಲ ಮನ್ನಾ ಮಾಡುವುದು ಖಚಿತ – ಎಚ್.ಡಿ ಕುಮಾರಸ್ವಾಮಿ

ಕರ್ನಾಟಕ ಜನತೆ ಇಡೀ ದೇಶದಲ್ಲೇ ಅತಿ ಹೆಚ್ಚು ತೆರಿಗೆ ಕಟ್ಟುವ ಜನ. ಹೀಗಿದ್ದರೂ, ಕರ್ನಾಟಕ ರೈತರ ಸಾಲ ಮನ್ನಾ ಮಾಡುವುದಕ್ಕೆ ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಯಾವುದೇ ಬೆಂಬಲ ಸಿಗುತ್ತಿಲ್ಲ. 48 ಸಾವಿರ ಕೋಟಿ ಸಾಲ ಮನ್ನಾ ಮಾಡುವುದು ಸುಲಭದ ಮಾತಲ್ಲ. ಇಂತಹ ಒಂದು ದಿಟ್ಟ ನಿರ್ಧಾರ ತೆಗೆದುಕೊಳ್ಲಲು ಬಹಳಷ್ಟು ಧೈರ್ಯ ಹೊಂದಿರಬೇಕು. ಇಂತಹ ಒಂದು ದೊಡ್ಡ ಕೆಲಸ ಮಾಡುವುದಕ್ಕೆ ಸಮಯ ಹಿಡಿಯುತ್ತದೆ. ಅದಕ್ಕೆ ಹಲವಾರು ಕ್ರಮಗಳಿರುತ್ತವೆ.  ಅಲ್ಲದೆ ಇದಕ್ಕೆ ಪ್ರಧಾನಿ ಮೋದಿಯಿಂದಲೂ ಯಾವುದೇ ಬೆಂಬಲ ದೊರಕುತ್ತಿಲ್ಲ.

ಆದರೆ ಕೇಂದ್ರ ಸರ್ಕಾರದಿಂದ ಬೆಂಬಲ ಸಿಗಲಿಲ್ಲ ಎಂಬ ಕಾರಣ ಒಡ್ಡಿ ತಮ್ಮ ದೃಢ ನಿರ್ಧಾರದಿಂದ ಹಿಂದೆ ಸರಿಯದೆ, ಎಚ್.ಡಿ ಕುಮಾರಸ್ವಾಮಿ ಅವರು ಸಾಲ ಮನ್ನಾ ಮಾಡುವುದು ಖಚಿತ ಎಂದು ಹೇಳಿದ್ದಾರೆ.

ಇದರ ಕುರಿತು ಮಾತನಾಡಿದ ಎಚ್.ಡಿ ಕುಮಾರಸ್ವಾಮಿ ಅವರು, ‘ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೇಂದ್ರ ಕೊಡಲಿಲ್ಲ  ಎಂದು ನಾವು ಸುಮ್ಮನೆ ಕೂರುವುದಿಲ್ಲ. ನಾನು ಕೊಟ್ಟ ಮಾತಿನಂತೆ ಸಾಲ ಮನ್ನಾಗೆ ಕ್ರಮ ಕೈಗೊಳ್ಳಲಿದ್ದೇನೆ’ ಎಂದು ಹೇಳಿದರು.

 

 

ಕೇಂದ್ರ ಕೊಡಲಿಲ್ಲ ಎಂದರೆ ರಾಜ್ಯ ಸರಕಾರ ಕೊಟ್ಟ ಮಾತು ತಪ್ಪುವುದಿಲ್ಲ. ರೈತರು ಆತಂಕಪಡುವ ಅಗತ್ಯವೂ ಇಲ್ಲ. ಡಿ.8ರಂದು ಸೇಡಂ, ದೊಡ್ಡಬಳ್ಳಾಪುರದಲ್ಲಿ ಸಹಕಾರ ಬ್ಯಾಂಕ್‌ಗಳ ಸಾಲ ಮನ್ನಾ ಪ್ರಕ್ರಿಯೆ ಪ್ರಾರಂಭವಾಗಲಿದೆ. ಜನವರಿಯಲ್ಲಿ ಹತ್ತು ಲಕ್ಷ ರೈತರ ಸಮಾವೇಶ ಮಾಡಿ ರೈತರಿಗೆ ಋಣಮುಕ್ತ ಪತ್ರ ನೀಡಲಿದ್ದೇವೆ ಎಂದು ಹೇಳಿದರು. ಈಗಾಗಲೇ ಸಹಕಾರ ಬ್ಯಾಂಕ್‌ಗಳ ಸಾಲ ಮನ್ನಾ ಕುರಿತು ಮೊದಲ ಕಂತು ಹಣ ಬಿಡುಗಡೆಗೆ ಸೂಚಿಸಲಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ ಕುರಿತು ನಿರಂತರ ಸಭೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Leave a Reply