ಕರ್ನಾಟಕವನ್ನು ಮಾದರಿಯಾಗಿ ತೆಗೆದುಕೊಂಡು ರೈತರ ಸಾಲ ಮನ್ನಾ ಮಾಡುತ್ತಿರುವ ಮೂರೂ ರಾಜ್ಯ ಸರ್ಕಾರಗಳು…!

ಕರ್ನಾಟಕ ರಾಜ್ಯದ ರೈತರ 45 ಸಾವಿರ ಕೋಟಿ ಸಾಲ ಮನ್ನಾ ಮಾಡಿ, ಇಡೀ ದೇಶವೇ ನಮ್ಮ ಸರ್ಕಾರದತ್ತ ತಿರುಗಿ ನೋಡುವಂತೆ ಮಾಡಿರುವ ಎಚ್.ಡಿ ಕುಮಾರಸ್ವಾಮಿ ಅವರನ್ನು ಸ್ಫೂರ್ತಿಯಾಗಿ ತೆಗೆದುಕೊಂಡು ಈಗ ಉತ್ತರ ಭಾರತದ ಮೂರು ರಾಜ್ಯಗಳು ರೈತರ ಸಾಲ ಮನ್ನಾ ಮಾಡುವ ನಿರ್ಧಾರ ಕೈಗೊಂಡಿವೆ. 

ಮೂರು ರಾಜ್ಯಗಳಲ್ಲಿ ಚುನಾವಣೆ ಗೆದ್ದು ಸರ್ಕಾರ ರಚಿಸುತ್ತಿರುವ ಕಾಂಗ್ರೆಸ್‌ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದೆ. 

ಕಾಂಗ್ರೆಸ್ ಸರ್ಕಾರವು ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಖಚಿತವಾಗಿ ಸಾಲಮನ್ನಾ ಮಾಡಿಯೇ ತೀರುತ್ತದೆ ಈ ಬಗ್ಗೆ ಅನುಮಾನವೇ ಬೇಡ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈ ದೃಢ ನಿರ್ಧಾರಕ್ಕೆ  ಎಚ್.ಡಿ ಕುಮಾರಸ್ವಾಮಿ ನೇತೃತ್ವದ  ಕರ್ನಾಟಕ ಸರ್ಕಾರವೇ ಪ್ರೇರಣೆ ಎಂದು ಹೇಳಿದ್ದಾರೆ. 

One thought on “ಕರ್ನಾಟಕವನ್ನು ಮಾದರಿಯಾಗಿ ತೆಗೆದುಕೊಂಡು ರೈತರ ಸಾಲ ಮನ್ನಾ ಮಾಡುತ್ತಿರುವ ಮೂರೂ ರಾಜ್ಯ ಸರ್ಕಾರಗಳು…!

  1. Very nice design in karnataka cm jai hind jai karnataka.

Leave a Reply