ರಾಜ್ಯದ ರೈತರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಸಿಎಂ…!

ರೈತರ  45 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡುವ ಮೂಲಕ ರಾಜ್ಯದ ರೈತರ ಆಶಾಕಿರಣವಾದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಈಗ ರೈತರಿಗೆ ಮತ್ತೊಂದು ಕೊಡುಗೆಯನ್ನು ನೀಡಲು ನಿರ್ಧರಿಸಿದ್ದಾರೆ. ಎಚ್.ಡಿ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ಪ್ರಾಥಮಿಕ ಭೂ ಅಭಿವೃದ್ಧಿ                  ಕ್ ಗಳ ದೀರ್ಘಾವಧಿ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಲು ತೀರ್ಮಾನಿಸಿದೆ.  

ರಾಜ್ಯದ ಒಟ್ಟು 178 ಬ್ಯಾಂಕ್ ಗಳು 1,432 ಕೋಟಿ ರೂಪಾಯಿ ಸಾಲ ನೀಡಿದ್ದು, 2017-18 ನೇ ಸಾಲಿನ ಬಡ್ಡಿ ಮನ್ನಾ ಮಾಡಲು ಕುಮಾರಸ್ವಾಮಿಯವರು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದ್ದು, ಈ ಕುರಿತು ಸುವರ್ಣ ವಿಧಾನ ಸೌಧದಲ್ಲಿ ಇಂದು ಪ್ರಕಟಿಸುವ ನಿರೀಕ್ಷೆ ಇದೆ.

ರಾಜ್ಯ ಸರ್ಕಾರ ತನ್ನ ಬಜೆಟ್ನಲ್ಲಿ ರೈತರ ಸಾಲ ಮನ್ನಾ ಯೋಜನೆ ಘೋಷಣೆ ಮಾಡಿದ ಬಳಿಕ ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕ್ ಗಳಲ್ಲಿ ಸಾಲ ಪಡೆದಿರುವವರು ಮರುಪಾವತಿಯನ್ನು ನಿಲ್ಲಿಸಿರುವ ಪರಿಣಾಮ ಈ ಬ್ಯಾಂಕುಗಳು ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ ಬಡ್ಡಿ ಮನ್ನಾ ಮಾಡಿದರೆ ರೈತರು ಅಸಲು ಮರು ಪಾವತಿಸಬಹುದೆಂಬ ನಿರೀಕ್ಷೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಈ ನಿರ್ಧಾರಕ್ಕೆ ಬಂದಿದ್ದಾರೆಂದು ಹೇಳಲಾಗಿದೆ.

Leave a Reply