ನಾಪತ್ತೆಯಾಗಿರುವ ಮೀನುಗಾರ ಕುಟುಂಬದವರಿಗೆ 1 ಲಕ್ಷ ರೂ….!

ಕರಾವಳಿ ಭಾಗದ 7 ಮಂದಿ ಮೀನುಗಾರರು ನಾಪತ್ತೆಯಾಗಿರುವ ಕುಟುಂಬದವರಿಗೆ ಒಂದು ಲಕ್ಷ ರೂ. ನೀಡಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಮುಖ್ಯಮಂತ್ರಿ, ನಾಪತ್ತೆಯಾಗಿರುವ ಮೀನುಗಾರರ ಕುಟುಂಬದವರಿಗೆ ಒಂದು ಲಕ್ಷ ರೂ. ಚೆಕ್ ವಿತರಣೆ ಮಾಡಲು ಕ್ರಮಕೈಗೊಳ್ಳಲಾಗಿದೆ.

ಆ ಮೀನುಗಾರರ ನೋವಿಗೆ ಸರ್ಕಾರ ಸ್ಪಂದಿಸುತ್ತಿದೆ. ಪಶುಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ಅವರು ಈಗಾಗಲೇ ಉಡುಪಿಯಲ್ಲಿದ್ದಾರೆ. 

ಮೀನುಗಾರರು ನಾಪತ್ತೆಯಾಗಿರುವ ಮಾಹಿತಿ ದೊರೆತ ತಕ್ಷಣ ತಮ್ಮ ಬಿಡುವಿಲ್ಲದ ಕೆಲಸದ ನಡುವೆಯೂ ಕೇಂದ್ರ ರಕ್ಷಣಾ ಸಚಿವರು, ವಿದೇಶಾಂಗ ಸಚಿವರ ಗಮನಕ್ಕೆ ತರಲಾಗಿದೆ. ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಕೇಂದ್ರ ಸರ್ಕಾರಕ್ಕೂ ಈಗಾಗಲೇ ಪತ್ರ ಬರೆಯಲಾಗಿದೆ. ಕರಾವಳಿ ಪಡೆ ಕೂಡ ನಮ್ಮ ಮನವಿಗೆ ಸ್ಪಂದಿಸಿದೆ. ರಾಜ್ಯ ಸರ್ಕಾರ ಎಲ್ಲಾ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಕೈಗೊಂಡಿದೆ. ನಾಪತ್ತೆಯಾಗಿರುವ ಮೀನುಗಾರರ ಶೋಧ ಕಾರ್ಯ ಮುಂದುವರೆಸಲಾಗುತ್ತಿದೆ ಎಂದು ಹೇಳಿದರು.

Leave a Reply