ತೆಂಗಿನ ನಾರು ಉದ್ಯಮದಲ್ಲಿ ಒಂದು ಲಕ್ಷ ಉದ್ಯೋಗ ಸೃಷ್ಟಿಸುತ್ತಿರುವ ಸಿಎಂ ಕುಮಾರಸ್ವಾಮಿ ಹಾಗು ಸಚಿವ ಶ್ರೀನಿವಾಸ್ ಜೋಡಿ…!

ದೇಶಕ್ಕೆ ಬಹು ದೊಡ್ಡ ಸಮಸ್ಯೆಯಾಗಿ ಕಾಡುತ್ತಿರುವ ಈ ಉರ್ಜಿತ ಜನಸಂಖ್ಯೆಗೆ ಉದ್ಯೋಗ ಸೃಷ್ಟಿಸುವ ಸವಾಲನ್ನು ಕರ್ನಾಟಕ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಹಳ ಗಂಭೀರವಾಗಿ ಪರಿಗಣಿಸಿದ್ದು, ಈ ಸಮಸ್ಯೆಗೆ ಸೂಕ್ತ ಪರಿಹಾರ ನೀಡಲು ಉದ್ಯೋಗ ಮೇಳದಂತ ಹಲವಾರು ಯೋಜನೆಗಳು ಹಾಗು ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ, ಹಾಗೂ ಅದು ಯಶಸ್ವಿಯಾಗುತ್ತಿದೆ.

ಸಣ್ಣ ಕೈಗಾರಿಕೆ ಕ್ಷೇತ್ರದಲ್ಲಿ ಲಕ್ಷಾಂತರ ಉದ್ಯೋಗವನ್ನು ಸೃಷ್ಟಿಸಬಹುದು ಎಂಬುದನ್ನು ಹಾಗೂ ಅದನ್ನು ಹೇಗೆ ಸೃಷ್ಟಿಸಬಹುದು ಎಂಬುದನ್ನೂ ಕೂಡ ಸೂಕ್ತವಾಗಿ ಅರಿತಿರುವ ಹೆಚ್.ಡಿ ಕುಮಾರಸ್ವಾಮಿ ಅವರು ಸಣ್ಣ ಕೈಗಾರಿಕೆ ಸಚಿವರಾದ ಎಸ್.ಆರ್ ಶ್ರೀನಿವಾಸ್ ಅವರ ಸಾತ್ ಪಡೆದು ತೆಂಗಿನ ನಾರು ಉದ್ದಿಮೆ ಕ್ಷೇತ್ರದಲ್ಲಿ ಕನಿಷ್ಠ 1 ಲಕ್ಷ ಉದ್ಯೋಗ ಸೃಷ್ಟಿಸಲು ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ತೆಂಗಿನ ನಾರಿನ ಉದ್ಯಮಗಳ ಪುನಶ್ಚೇತನ ಕುರಿತು ಚರ್ಚಿಸಲು ಬುಧವಾರ ಕರೆದಿದ್ದ ಸಭೆಯಲ್ಲಿ ಅವರು ಮಾತನಾಡಿದರು.

‘ದೇಶ ಒಟ್ಟು ತೆಂಗು ಉತ್ಪಾದನೆಯಲ್ಲಿ ಕರ್ನಾಟಕದ ಪಾಲು ಶೇ 29. ಆದರೆ, ತೆಂಗಿನ ನಾರಿನ ಉತ್ಪಾದನೆಯಲ್ಲಿ ಶೇ 10 ರಷ್ಟು ಮಾತ್ರ ಇದೆ. ರಾಜ್ಯದಲ್ಲಿ ಉತ್ತಮ ಗುಣಮಟ್ಟದ ತೆಂಗಿನ ನಾರು ಲಭ್ಯವಿದೆ. ಈ ಉದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡಲು ಸಿದ್ಧರಿದ್ದೇವೆ’ ಎಂದು ಮುಖ್ಯಮಂತ್ರಿ ಹೇಳಿದರು.

ತೆಂಗಿನ ನಾರಿನ ಉತ್ಪನ್ನಗಳ ತಯಾರಿಕಾ ಘಟಕಗಳ ಸ್ಥಾಪನೆಗೆ ಪೂರಕ ವಾತಾವರಣ, ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡುವಂತೆಯೂ ಅವರು ಸಲಹೆ ನೀಡಿದರು.

Leave a Reply