ತಪ್ಪಿತಸ್ಥರಿಗೆ ಶಿಕ್ಷೆ ಆಗೇ ಆಗುತ್ತದೆ…!

ವಿಧಾನಸೌಧದ ಆವರಣದಲ್ಲಿ ಸಚಿವ ಪುಟ್ಟರಂಗ ಶೆಟ್ಟಿ ಆಪ್ತ ಮೋಹನ್ ಬಳಿ 25.76 ಲಕ್ಷ ರು. ಪತ್ತೆಯಾದ ಪ್ರಕರಣದ ಬಗ್ಗೆ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಪುಣ್ಯತಿಥಿ ನಿಮಿತ್ತ ವಿಧಾನಸೌಧದ ಆವರಣದಲ್ಲಿರುವ ಪ್ರತಿಮೆಗೆ ಪುಷ್ಪಚಾರಣೆ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ ಅವರು “ವಿಧಾನಸೌಧದಲ್ಲಿ ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಕೆಲವು ಲೋಪಗಳಾಗಿವೆಯಾದರೂ, ತಪ್ಪಿತಸ್ಥರನ್ನು ರಕ್ಷಿಸುವ ಮಾತೇ ಇಲ್ಲ. ತಪ್ಪಿತಸ್ಥರು ಯಾರೇ ಆಗಿರಲಿ, ಅವರಿಗೆ ತಕ್ಕ ಶಿಕ್ಷೆ ಆಗುತ್ತದೆ. ತಪ್ಪುಗಳನ್ನು ಮುಚ್ಚಿಹಾಕುವ ಕೆಲಸ ನನ್ನ ರಾಜಕೀಯ ಜೀವನದಲ್ಲೇ ಎಂದೂ ಮಾಡಿಲ್ಲ” ಎಂದು ಹೇಳಿದರು.

ನಂತರ ” ಮಂಗನ ಕಾಯಿಲೆ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಜನರು ಆತಂಕ ಪಡುವ ಅವಶ್ಯಕತೆ ಇಲ್ಲ. ಈಗಾಗಲೇ ಕಾಯಿಳಿಗೆ ತುತ್ತಾಗಿರುವವರಿಗೂ ಸರ್ಕಾರ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗುತ್ತಿದೆ” ಎಂದು ರಾಜ್ಯದಲ್ಲಿ ಹೆಚ್ಚಾಗಿರುವ ಮಂಗನ ಜ್ವರ ಕಾಯಿಲೆಯ ಹಾವಳಿ ಬಗ್ಗೆ ಹೇಳಿದರು.

Leave a Reply