ಯಾವುದೇ ಕಾರಣಕ್ಕೂ ವಿದ್ಯುತ್ ಕಡಿತಗೊಳಿಸಬಾರದು : ಸಿಎಂ ಕಟ್ಟಪ್ಪಣೆ

ರಾಜ್ಯದಲ್ಲಿ ಕಳೆದ ಎರಡು ದಿನ ಲೋಡ್ ಶೆಡ್ಡಿಂಗ್ ಆದ ಕಾರಣ ಜನರಿಗೆ ಕೊಂಚ ಕಸವಿಸಿ ಉಂಟಾಗಿದೆ. ಇದರ ಬಗ್ಗೆ ದೂರು ಕೂಡ ವ್ಯಾಪಕವಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿ ಮಾನ್ಯ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಸಂಜೆ ಬೆಂಗಳೂರು ನಗರ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ವಿದ್ಯುತ್ ಪೂರೈಕೆ ಪರಿಸ್ಥಿತಿಯಾ ಬಗ್ಗೆ ತುರ್ತು ಸಭೆ ನಡೆಸಿದರು.

ಪರೀಕ್ಷಾ ಸಮಯ ಸಮೀಪಿಸುತ್ತಿರುವುದರಿಂದ ರಾಜ್ಯದಲ್ಲಿ ಯುವುದೇ ಕಾರಣಕ್ಕೂ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು. ಲೋಡ್ ಶೆಡ್ಡಿಂಗ್ ಜಾರಿಯಾಗದಿದ್ದರು, ಏಕೆ ತೊಂದರೆ ಉಂಟಾಗುತ್ತಿದೆ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು. ಇದಕ್ಕೆ ಅಧಿಕಾರಿಗಳು, ಬೆಂಗಳೂರು ನಗರದ ಕೆಲವೆಡೆ ತಾಂತ್ರಿಕ ಸಮಸ್ಯೆಯಿಂದ ವಿದ್ಯುತ್ ಪೂರೈಕೆಯಲ್ಲಿ ಅಲ್ಪ ಪ್ರಮಾಣದ ವ್ಯತ್ಯಯ ಉಂಟಾಗಿದೆ. ಇದನ್ನು ಸರಿಪಡಿಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಹೇಳಿದರು. ಆಗ ಕುಮಾರಸ್ವಾಮಿ ಅವರು, ಆದಷ್ಟು ಬೇಗ ಎಲ್ಲ ಸಮಸ್ಯೆಗಳು ಬಗೆಹರಿದು, ರಾಜ್ಯದಲ್ಲಿ ನಿರಂತರವಾಗಿ ವಿದ್ಯುತ್ ಪೂರೈಕೆಯಾಗಬೇಕು ಎಂದು ಆದೇಶಿಸಿದರು.

Leave a Reply