ದರ್ಶನ್ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂ ಆದೇಶ…!

ನಟ ದರ್ಶನ್ ಅವರ ಬೆಂಗಳೂರಿನ ರಾಜರಾಜೇಶ್ವರಿ ನಗರದಲಿರುವ ಮನೆ ಮತ್ತು ಕಚೇರಿ ಮೇಲೆ ದುಷ್ಕರ್ಮಿಗಳು ಕಲ್ಲು ತೋರಟ ನಡೆಸಿದ್ದಾರೆ. ರಾಜರಾಜೇಶ್ವರಿ ನಗರ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆಗೆ ಬೆಳ್ಳಗಿನ ಜಾವ 3 ಗಂಟೆಯಲ್ಲಿ ಕಲ್ಲು ತೋರಿ ಎಸ್ಕೇಪ್ ಆಗಿದ್ದಾರೆ ದುಷ್ಕರ್ಮಿಗಳು. ಕಲ್ಲು ತೋರಾಟದಲ್ಲಿ ದರ್ಶನ್ ಕಾರಿನ ಗಾಜು ಜಖಂ ಆಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನೆನ್ನೆ ನಿಖಿಲ್ ಬೆಂಬಲಿಗರ ಕಾರಿನ ಮೇಲೆ ದರ್ಶನ್ ಅಭಿಮಾನಿಗಳು ಕಲ್ಲು ತೋರಾಟ ನಡೆಸಿದ ಕಾರಣ, ಅದೇ ದ್ವೇಷದಿಂದ ಕಿಡಿಗೇಡಿಗಳು ಈ ಕೆಲಸ ಮಾಡಿರಬಹುದು ಎಂಬ ಮಾತುಗಳು ಕೇಳಿಬರುತ್ತಿದ್ದವು. ಇದರ ಕುರಿತು ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು, ಎರಡು ಘಟನೆಗಳಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳ ವಿರುದ್ಧ ತೀವ್ರ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ್ದೇನೆ ಎಂದು ಹೇಳಿದ್ದಾರೆ.

ಸುದ್ಧಿ ವಾಹಿನಿ ಪತ್ರಕರ್ತರೊಂದಿಗೆ ಘಟನೆಯ ಕುರಿತು ಮಾತನಾಡಿದ ಪಶ್ಚಿಮ ವಿಭಾಗ ಡಿಸಿಪಿ ರವಿ.ಡಿ ಚೆನ್ನಣ್ಣನವರ್ ಅವರು ‘ದರ್ಶನ್ ಅವರ ಮನೆ ಮೇಲೆ ಕಲ್ಲುತೂರಾಟ ನಡೆದಿರುವುದು ಸತ್ಯ. ದರ್ಶನ್ ಅವರ ನಿವಾಸದ ಮುಂದೆ ಮೂರು ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದ್ದು, ದುಷ್ಕರ್ಮಿಗಳು ಬಂದಿದ್ದರ ಬಗ್ಗೆ ಸೆರೆಯಾಗಿಲ್ಲ ಎನ್ನಲಾಗಿದೆ. ಯಾಕಂದ್ರೆ, ಸಿಸಿಟಿವಿ ಕಾರ್ಯ ನಿರ್ವಹಿಸುತ್ತಿರಲಿಲ್ಲ ಎಂದು ಗೊತ್ತಾಗಿದೆ. ಇನ್ನು ನಟ ದರ್ಶನ್ ಕೂಡ ಮನೆಯಲ್ಲಿ ಇರಲಿಲ್ಲ. ಶೂಟಿಂಗ್ ನಿಮಿತ್ತ ಹೊರಗಡೆ ಹೋಗಿದ್ದರು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಆದೇಶ ನೀಡಿದ್ದಾರೆ’ ಎಂದು ಹೇಳಿದ್ದಾರೆ.

One thought on “ದರ್ಶನ್ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂ ಆದೇಶ…!

  1. K B NAGARAJ says:

    I think its fabricated that’s why camera’s are not working

Leave a Reply