ನಾಮಪತ್ರ ದಾಖಲಿಸುವ ದಿನವೇ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲು…!

ಕೊಡಗಿಗೆ ರೈಲು ತರದಿದ್ದರೇ ನಾನು ಮತ್ತೆ ನನ್ನ ಜೀವನದಲ್ಲೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನಾಲ್ಕು ವರ್ಷಗಳ ಹಿಂದೆ ಶಪಥ ಮಾಡಿದ್ದ ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರು ಇಂದು ನಾಮಪತ್ರ ಸಲ್ಲಿಸುತ್ತಿದ್ದಾರೆ. ಆದರೆ ಅವರು ನಾಮಪತ್ರ ಸಲ್ಲಿಸುವ ದಿನವೇ ಒಂದು ಆಘಾತ ಎದುರಾಗಿದೆ. ಇತ್ತ ಪ್ರತಾಪ್ ಸಿಂಹ ಟೆಂಪಲ್ ರನ್ ಮಾಡುತ್ತಿದ್ದು, ನಾಮಪತ್ರ ಸಲ್ಲಿಸುವ ದಿನವೇ ಅವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು ಇದರಿಂದ ಅವರು ಕಂಗಾಲಾಗಿದ್ದಾರೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಸಿಂಹ ವಿರುದ್ಧ ದೂರು ದಾಖಲಾಗಿದೆ.

ಪ್ರತಾಪ್ ಸಿಂಹ ಅವರು ಸರ್ಕಾರಿ ಅಂಚೆ ಕಚೇರಿ ಮೂಲಕ ಬುಕ್ ಲೆಟ್‍ಗಳನ್ನ ಹಂಚಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ಕೆಎಸ್‍ಓಯು) ವ್ಯವಸ್ಥಾಪನಾ ಮಂಡಳಿ ಮಾಜಿ ಸದಸ್ಯರಾದ ಕೆ ಎಸ್.ಶಿವರಾಮ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಗಳು ಈ ದೂರನ್ನು ಪರಿಶೀಲನೆ ನಡೆಸಿದ ಬಳಿಕ ಫ್ಲೈಯಿಂಗ್ ಸ್ಕ್ವಾಡ್ ಸಹಾಯಕ ಚುನಾವಣಾಧಿಕಾರಿ ಉಮೇಶ್ ಅವರು ದೂರು ನೀಡಿದ್ದು, ಮಾರ್ಚ್ 23 ರಂದು ಎಫ್‍ಐಆರ್ ದಾಖಲು ಮಾಡಲಾಗಿದೆ.

Leave a Reply