ಮಗನ ಉದ್ಧಾರಕ್ಕಾಗಿ ಸಮಾಜವನ್ನು ಬಲಿಕೊಡುತ್ತಿದ್ದಾರೆ-ಲಿಂಗಾಯತ ಸಮುದಾಯದಲ್ಲೇ ಯಡಿಯೂರಪ್ಪನಿಗೆ ಛೀಮಾರಿ!

ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಲಿಂಗಾಯತ-ವೀರಶೈವ ಸಮಾಜದ ಮುಖಂಡರ ಸಭೆಯಲ್ಲಿ ರಾಜ್ಯ ರಾಜಕೀಯದಲ್ಲಿ ಲಿಂಗಾಯತ ನಾಯಕರ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ ನಡೆದಿದೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಶೋಕ ಬಿ. ಹಿಂಚಿಗೇರಿ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಸರ್ವಭೂಷಣ ಮಠದ ಮಲ್ಲಿಕಾರ್ಜುನ ದೇವರು ಸೇರಿದಂತೆ ಸಮಾಜದ ವಿವಿಧ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಬಗ್ಗೆ ಸಾಕಷ್ಟು ಅಸಮಾಧಾನ ವ್ಯಕ್ತಪಡಿಸಲಾಯಿತು.

“ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮಗನ ಉದ್ಧಾರಕ್ಕಾಗಿ ಸಮಾಜವನ್ನು ಬಲಿಕೊಡುತ್ತಿದ್ದಾರೆ. ಬಿ. ವೈ. ವಿಜಯೇಂದ್ರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ” ಎಂದು ಹೈಕೋರ್ಟ್‌ನ ಹಿರಿಯ ವಕೀಲ ಗಂಗಾಧರ ಅವರು ಕಿಡಿ ಕಾರಿದರು.

ಯಡಿಯೂರಪ್ಪನವರ ಸಂಪೂರ್ಣ ರಾಜಕೀಯ ತಾಕತ್ತು ಹಸುಗೂಸು ತಾಯಿಯ ಎದೆಹಾಲಿನ ಮೇಲೆ ಅವಲಂಬಿತವಾದಂತೆ ವೀರಶೈವ-ಲಿಂಗಾಯತ ಸಮುಧಾಯದ ಬೆಂಬಲದ ಮೇಲೆ ಅವಲಂಬಿತವಾಗಿರುವ ಕಾರಣ, ಯಡಿಯೂರಪ್ಪ ಇದನ್ನು ಸಹ ಕಳೆದುಕೊಂಡರೆ ಅವರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಲು ರಣತಂತ್ರ ಹೆಣೆಯುತ್ತಿರುವ ಬಿಜೆಪಿ ನಾಯಕರ ಹಾದಿ ಇನ್ನೂ ಸುಗಮವಾಗಲಿದೆ.

ಅನುಕಂಪದ ಆಧಾರದಲ್ಲಿ ಯಡಿಯೂರಪ್ಪ ಅವರನ್ನು ಸಮುದಾಯದ ನಾಯಕ ಎಂದು ಒಪ್ಪಿಕೊಂಡಿತು. ಡಿಸೆಂಬರ್‌ನಲ್ಲಿ ಅವರ ನಾಯಕತ್ವ ಕೊನೆಯಾಗುವ ಲಕ್ಷಣಗಳು ಕಾಣುತ್ತಿವೆ. ಮುಂದಿನ ದಿನಗಳಲ್ಲಿ ಮೌಲ್ಯಯುತ ಹಾಗೂ ಗಟ್ಟಿ ನಾಯಕರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಬೇಕಾಗಿದೆ. ಆ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್ ಕೂಡ ಚಿಂತನೆ ನಡೆಸಬೇಕೆಂಬ ವಿಷಯ ಸಭೆಯಲ್ಲಿ ತೀರ್ಮಾನವಾಯಿತು.

ಬಿಜೆಪಿ ಹೈ ಕಮಾಂಡ್ ಯಡಿಯೂರಪ್ಪನವರನ್ನು ಇನ್ನೂ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಸಲು ಅವಕಾಶ ನೀಡಿರುವುದು ಲಿಂಗಾಯತ ಮತಗಳನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳುವ ಏಕೈಕ ಕಾರಣಕ್ಕಾಗಿ ಎಂಬುದು ಗುಟ್ಟಿನ ವಿಷಯವೇನಲ್ಲ. ಈಗ ಅದೇ ಸಮುದಾಯದಿಂದ ಅವರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿರುವುದು ಯಡಿಯೂರಪ್ಪನವರ ಸ್ಥಿತಿ ಚಿಂತಾಜನಕವಾಗಿಸಿದೆ.

2 thoughts on “ಮಗನ ಉದ್ಧಾರಕ್ಕಾಗಿ ಸಮಾಜವನ್ನು ಬಲಿಕೊಡುತ್ತಿದ್ದಾರೆ-ಲಿಂಗಾಯತ ಸಮುದಾಯದಲ್ಲೇ ಯಡಿಯೂರಪ್ಪನಿಗೆ ಛೀಮಾರಿ!

  1. Kg kattaya says:

    ಜಾತಿ ಒಡೆದ ಆಳುವ ನೀತಿ ಬೇಡ ಅಂತ ಕಾಣುತ್ತೆ

Leave a Reply