ಚನ್ನಪಟ್ಟಣ ಜಿಲ್ಲಾಪ್ರವಾಸ ಕೈಗೊಂಡು ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಹೆಚ್.ಡಿ.ಕೆ

ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ರವರು ರಾಮನಗರ ಜಿಲ್ಲೆಗೆ ಸೇರಿದ ತಮ್ಮ ಸ್ವಕ್ಷೇತ್ರವಾದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿದ್ದಾರೆ.

ಕುಮಾರಸ್ವಾಮಿ ಅವರು ರಸ್ತೆ ಅಭಿವೃದ್ಧಿ ಕಾಮಗಾರಿ, ನಾಳೆಗಳ ಅಭಿವೃದ್ಧಿ ಕಾಮಗಾರಿ, ಏತ ನೀರಾವರಿ ಯೋಜನೆಗಳಿಗೆ ಗುದ್ದಲಿ ಪೂಜೆ, ಶುದ್ಧ ಕುಡಿಯುವ ನೀರಿನ ಘಟಕಗಳ ಉದ್ಘಾಟನೆ, ಸರ್ಕಾರಿ ಪದವಿ ಪೂರ್ವ ಕಾಲೇಜು ಕಟ್ಟಡಗಳ ಕಾಮಗಾರಿ ಪರಿಶೀಲನೆ ಹೀಗೆ ನಾನಾ ರೀತಿಯ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಾ, ಹತ್ತಾರು ಗ್ರಾಮಗಳಿಗೆ ಭೇಟಿ ನೀಡಿ ಜನರ ಕಷ್ಟಗಳನ್ನು ಆಲಿಸಿದರು.

ತಮ್ಮ ನೆಚ್ಚಿನ ನಾಯಕನನ್ನು ಭೇಟಿ ಯಾಗಿ ತಮ್ಮ ಸುಖ-ದುಃಖಗಳನ್ನು ಹಂಚಿಕೊಳ್ಳಲು ನೂರಾರು ಜನರು ಸೇರಿದ್ದು, ಯುವಕ ಯುವತಿಯರು ಸೆಲ್ಫಿಗಾಗಿ ಮುಗಿಬಿದ್ದರು.

Leave a Reply