ಪ್ರಧಾನಿ ಮೋದಿ ಹಾಗೂ ದಿಲ್ಲಿ ರೈತ ಪ್ರತಿಭಟನಾಕಾರರಿಗೆ ಕುಮಾರಸ್ವಾಮಿ ಸಲಹೆ

ನೂತನ ಕೃಷಿ ಕಾಯ್ದೆ ವಿರೋಧಿಸಿ ದಿಲ್ಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರ ಆಕ್ರೋಶ ಕಮ್ಮಿಯಾಗುವ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ. ಅಲ್ಲದೆ ಬಹುತೇಕ ಪಂಜಾಬ್ ರಾಜ್ಯದವರಿಂದ ಕೂಡಿರುವ ಈ ಚಳುವಳಿಗೆ ಅಮೇರಿಕ ದೇಶಗಳು ಬೆಂಬಲ ವ್ಯಕ್ತಪಡಿಸಿರುವುದು ವಿಶ್ವಾದ್ಯಂತ ಸುದ್ದಿ ಮಾಡುತ್ತಿದೆ.

ಆದರೆ ಈ ಸಮಸ್ಯೆಯನ್ನು ಆಲಿಸಿ ಪ್ರತಿಭಟನಾಕಾರರೊಡನೆ ಶಾಂತಿ ಒಪ್ಪಂದ ಮಾಡಿಕೊಳ್ಳುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಲ್ಲಿಯವರೆಗೂ ಯಾವುದೇ ರೀತಿಯ ಫಲಿತಾಂಶ ಕಂಡಿಲ್ಲ. ಈ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪ್ರಧಾನಿ ಮೋದಿ ಅವರಿಗೆ ಹಾಗೂ ರೈತರಿಗೆ ವಾಸ್ತವಿಕವಾದಿ ಸಲಹೆ ನೀಡಿ ಈ ಕಾಯ್ದೆಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

ವಿಶ್ವಾದ್ಯಂತ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿರುವ ಈ ಚಳುವಳಿಯಿಂದ ಮೋದಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗಳಿಸಿರುವ ಗೌರವಕ್ಕೆ ಹೇಗೆ ಪೆಟ್ಟು ನೀಡುತ್ತಿದೆ. ಹಾಗು ಈ ಸಮಸ್ಯೆಯನ್ನು ಆಲಿಸುವಲ್ಲಿ ಕೇಂದ್ರ ಸರ್ಕಾರ ಯಾವ ರೀತಿ ಹೆಜ್ಜೆ ಇಡಬೇಕು. ಹಾಗು ರೈತರು ಈ ಕಾಯ್ದೆಗೆ ಯಾವ ರೀತಿ ಪ್ರತಿಕ್ರಿಯಿಸಬೇಕು ಎನ್ನುವ ಬಗ್ಗೆ ಸಲಹೆ ನೀಡಿದ್ದಾರೆ.

ಕಾಯ್ದೆ ಬಗ್ಗೆ ಕೇಂದ್ರ ಸಚಿವ @rajnathsingh ಮಾತುಗಳು ಭರವಸೆ ಮೂಡಿಸುವಂತಿವೆ. ಕಾಯ್ದೆಗಳ ಪ್ರಯೋಗಾತ್ಮಕ ಜಾರಿಗೆ ಅವಕಾಶ ನೀಡುವಂತೆ ಅವರು ಕೋರಿದ್ದಾರೆ. ಅಲ್ಲದೆ, ಕಾಯ್ದೆಗಳು ರೈತರಿಗೆ ಸಮಸ್ಯೆ ಸೃಷ್ಟಿಸುವಂತಿದ್ದರೆ ಸರ್ಕಾರ ಅವುಗಳನ್ನು ಹಿಂದಕ್ಕೆ ಪಡೆಯುವುದಾಗಿಯೂ ಅವರು ಆಶ್ವಾಸನೆ ನೀಡಿದ್ದಾರೆ. ರೈತರೂ ಈ ನಿಟ್ಟಿನಲ್ಲಿ ಯೋಚಿಸಬೇಕು.
4/5

— H D Kumaraswamy (@hd_kumaraswamy) December 26, 2020

Leave a Reply