ಲಿಂಗತ್ವ ಅಲ್ಪಸಂಖ್ಯಾತರಿಗೆ ಬೆಂಬಲ: ಜೆಡಿಎಸ್ ಗೆ ಮೆಚ್ಚಿಗೆಯ ಸುರಿಮಳೆ

ಸಮಾಜದ ಅತ್ಯಂತ ಶೋಷಿತ ವರ್ಗಗಳಲ್ಲಿ ಒಂದಾದ ಲಿಂಗತ್ವ ಅಲ್ಪಸಂಖ್ಯಾತರ ಕಲ್ಯಾಣದತ್ತ ಜೆಡಿಎಸ್ ದಿಟ್ಟ ಹೆಜ್ಜೆ ಇಟ್ಟಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರವಾಮಿಯವರ ಸ್ವಕ್ಷೇತ್ರವಾದ ಚನ್ನಪಟ್ಟಣದ ವಿಧಾನ ಸಭಾ ಕ್ಷೇತ್ರಕ್ಕೆ ಸೇರಿದ ಕೂಡ್ಲೂರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಾಕಷ್ಟು ಪ್ರಬಲ ಸ್ಥಳೀಯ ನಾಯಕರಿದ್ದರೂ ಸಹ ಮಮತಾ ಎಂಬ ಮಂಗಳಮುಖಿ ಅವರನ್ನು ಬೆಂಬಲಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದರು. ಈಗ ಮಮತಾ ಅವರು ಚುನಾವಣೆಯಲ್ಲಿ ವಿಜೇತರಾಗಿದ್ದು ಜೆಡಿಎಸ್ ಪಕ್ಷ ಎಲ್ಲರಿಂದು ಸಾಕಷ್ಟು ಮೆಚ್ಚುಗೆಗೆ ಪಾತ್ರರಾಗುತ್ತಿದ್ದರೆ.

ಇದರ ಕುರಿತು ಟ್ವಿಟರ್ ಮೂಲಕ ಮಾಹಿತಿ ಹಂಚಿಕೊಂಡ ಕುಮಾರಸ್ವಾಮಿ ಅವರು ಮಮತಾ ಅವರ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿ ಇದು ಕೇವಲ ಮೊದಲ ಹೆಜ್ಜೆ, ಮಮತಾ ಅವರು ತಮ್ಮ ಸಮುದಾಯದ ಪ್ರತಿನಿಧಿಯಾಗಿ ಗುರುತಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದರು.

ಸಮಾಜದ ಅಲ್ಪಸಂಖ್ಯಾತ ಹಾಗೂ ಶೋಷಿತ ವರ್ಗಗಳ ಧ್ವನಿಯಾಗಿ ಗುರುತಿಸಿಕೊಂಡಿರುವ ಜೆಡಿಎಸ್ ಗೆ ಇದು ಹೊಸ ಮೈಲಿಗಲ್ಲು ಎಂದೇ ಹೇಳಬಹುದು. ಜೆಡಿಎಸ್ ನಾ ಈ ಶ್ಲಾಘನೀಯ ನಡೆಗೆ ಜನರಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದ್ದು ಇತರೆ ರಾಜಕೀಯ ಪಕ್ಷಗಳಿಗೂ ಮಾದರಿಯಾಗಿದೆ.

Leave a Reply