ಕನ್ನಡ ಮಾತಾಡುತ್ತೇವೆ, ಕನ್ನಡದ ಧ್ವಜ ಹಾರಿಸುತ್ತೇವೆ. ಅದನ್ನು ಕೇಳಲು ಎಂಇಎಸ್‌, ಶಿವಸೇನೆಯವರು ಯಾವ ಊರ ದೊಣ್ಣೆ ನಾಯಕರು?

ಬೆಳಗಾವಿಯಲ್ಲಿ ಕನ್ನಡ ವಿರೋಧಿ ಚಟುವಟಿಕೆಗಳು ಮಿತಿ ಮೀರುತ್ತಿವೆ. ನಮ್ಮ ನಾಡಿನಲ್ಲಿ ನಮ್ಮ ಕನ್ನಡ ಧ್ವಜಾರೋಹಣ ಮಾಡುವುದನ್ನು ಶಿವಸೇನಾ ಮತ್ತು ಮಹಾರಾಷ್ಟ್ರ ಸಮಿತಿ ವಿರೋಧಿಸುತ್ತಿದೆ. ಇತ್ತೀಚೆಗಷ್ಟೇ ಸಾಕಷ್ಟು ಹೋರಾಡಿ ನಗರಪಾಲಿಕೆ ಮುಂಭಾಗ ಕನ್ನಡ ಪರ ಹೋರಾಟಗಾರರು ಕನ್ನಡ ಧ್ವಜಾರೋಹಣ ಮಾಡಿದ್ದರು. ಇದನ್ನು ವಿರೋಧಿಸಿ ಇಂದು ಶಿವಸೇನಾ ಮತ್ತು ಮಹಾರಾಷ್ಟ್ರ ಸಮಿತಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದರ ಕುರಿತು ಯಾವ ಬಿಜೆಪಿ ನಾಯಕರು ಸಹ ಧ್ವನಿಯೆತ್ತಿಲ್ಲ. ಅಲ್ಲಿನ ಸ್ಥಳೀಯ ಸಹ ಬಿಜೆಪಿ ಯವರೇ ಎಂಬುದು ಗಮನಾರ್ಹ.

ಆದರೆ ನಮ್ಮ ನಾಡು, ನಮ್ಮ ನೆಲಕ್ಕೆ ಸದಾ ಮಿಡಿಯುವ ಪ್ರಾದೇಶಿಕ ಪಕ್ಷ ಜೆಡಿಎಸ್ ಪಕ್ಷದ ನಾವಿಕ ಹೆಚ್ ಡಿ ಕುಮಾರಸ್ವಾಮಿ ಅವರು ಇದರ ವಿರುದ್ಧ ಕಿಡಿ ಕಾರಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬೆಳಗಾವಿಯ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಬಗ್ಗೆ ಹೇಳಿದಾಗ ಅದರ ವಿರುದ್ಧ ಮೊದಲು ಧ್ವನಿಯೆತ್ತಿದ ಕುಮಾರಸ್ವಾಮಿ ಇತರೆ ರಾಜಕಾರಣಿಗಳನ್ನು ಈ ವಿಷಯದ ಕುರಿತು ಧ್ವನಿಯೆತ್ತಲು ಪ್ರೇರೇಪಿಸಿದ್ದರು. ನಂತರ ಬಿಜೆಪಿ ನಾಯಕರು ತಮ್ಮ ಮಾನ ಉಳಿಸಿಕೊಳ್ಳಲು ಕಾಟಾಚಾರದ ಹೇಳಿಕೆಗಳನ್ನು ನೀಡಿದ್ದರು. ಈ ಬಾರಿಯೂ ಸಹ ಕುಮಾರಸ್ವಾಮಿ ಪಕ್ಷವನ್ನು ಮರೆತು ಎಲ್ಲರು ಒಗ್ಗಟ್ಟಾಗಿ ಇದರ ವಿರುದ್ಧ ಹೋರಾಡಬೇಕು ಎಂದು ಕರೆ ನೀಡಿದ್ದಾರೆ.

ಟ್ವಿಟ್ಟರ್ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರ ಟ್ವೀಟ್ ಗಳು ಇಂತಿವೆ:

Leave a Reply