ಬೆಳಗಾವಿಯಲ್ಲಿ ಕನ್ನಡ ವಿರೋಧಿ ಚಟುವಟಿಕೆಗಳು ಮಿತಿ ಮೀರುತ್ತಿವೆ. ನಮ್ಮ ನಾಡಿನಲ್ಲಿ ನಮ್ಮ ಕನ್ನಡ ಧ್ವಜಾರೋಹಣ ಮಾಡುವುದನ್ನು ಶಿವಸೇನಾ ಮತ್ತು ಮಹಾರಾಷ್ಟ್ರ ಸಮಿತಿ ವಿರೋಧಿಸುತ್ತಿದೆ. ಇತ್ತೀಚೆಗಷ್ಟೇ ಸಾಕಷ್ಟು ಹೋರಾಡಿ ನಗರಪಾಲಿಕೆ ಮುಂಭಾಗ ಕನ್ನಡ ಪರ ಹೋರಾಟಗಾರರು ಕನ್ನಡ ಧ್ವಜಾರೋಹಣ ಮಾಡಿದ್ದರು. ಇದನ್ನು ವಿರೋಧಿಸಿ ಇಂದು ಶಿವಸೇನಾ ಮತ್ತು ಮಹಾರಾಷ್ಟ್ರ ಸಮಿತಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದರ ಕುರಿತು ಯಾವ ಬಿಜೆಪಿ ನಾಯಕರು ಸಹ ಧ್ವನಿಯೆತ್ತಿಲ್ಲ.

ಆದರೆ ನಮ್ಮ ನಾಡು, ನಮ್ಮ ನೆಲಕ್ಕೆ ಸದಾ ಮಿಡಿಯುವ ಪ್ರಾದೇಶಿಕ ಪಕ್ಷ ಜೆಡಿಎಸ್ ಪಕ್ಷದ ನಾವಿಕ ಹೆಚ್ ಡಿ ಕುಮಾರಸ್ವಾಮಿ ಅವರು ಇದರ ವಿರುದ್ಧ ಕಿಡಿ ಕಾರಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬೆಳಗಾವಿಯ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಬಗ್ಗೆ ಹೇಳಿದಾಗ ಅದರ ವಿರುದ್ಧ ಮೊದಲು ಧ್ವನಿಯೆತ್ತಿದ ಕುಮಾರಸ್ವಾಮಿ ಇತರೆ ರಾಜಕಾರಣಿಗಳನ್ನು ಈ ವಿಷಯದ ಕುರಿತು ಧ್ವನಿಯೆತ್ತಲು ಪ್ರೇರೇಪಿಸಿದ್ದರು. ನಂತರ ಬಿಜೆಪಿ ನಾಯಕರು ತಮ್ಮ ಮಾನ ಉಳಿಸಿಕೊಳ್ಳಲು ಕಾಟಾಚಾರದ ಹೇಳಿಕೆಗಳನ್ನು ನೀಡಿದ್ದರು. ಈ ಬಾರಿಯೂ ಸಹ ಕುಮಾರಸ್ವಾಮಿ ಪಕ್ಷವನ್ನು ಮರೆತು ಎಲ್ಲರು ಒಗ್ಗಟ್ಟಾಗಿ ಇದರ ವಿರುದ್ಧ ಹೋರಾಡಬೇಕು ಎಂದು ಕರೆ ನೀಡಿದ್ದಾರೆ.
ಟ್ವಿಟ್ಟರ್ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರ ಟ್ವೀಟ್ ಗಳು ಇಂತಿವೆ:
ನಮ್ಮ ನೆಲ, ನಮ್ಮ ಭಾಷೆ, ನಮ್ಮ ಧ್ವಜ. ಕನ್ನಡ ಮಾತಾಡುತ್ತೇವೆ, ಕನ್ನಡದ ಧ್ವಜ ಹಾರಿಸುತ್ತೇವೆ. ಅದನ್ನು ಕೇಳಲು ಎಂಇಎಸ್, ಶಿವಸೇನೆಯವರು ಯಾವ ಊರ ದೊಣ್ಣೆ ನಾಯಕರು? ಇವರ ಬಾಧೆಯಾದರೂ ಏನು? ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವಿಗೆ ಇವರು ಇಂದು ನಡೆಸುತ್ತಿರುವ ಪ್ರತಿಭಟನೆ ಸಮಾಜವಿರೋಧಿ. ಇವರ ಮನಸ್ಸಲ್ಲಿರುವ ವಿಷ ದೇಶದ್ರೋಹಕ್ಕೆ ಸಮ. 1/5 pic.twitter.com/V2JlVMYtZv
— H D Kumaraswamy (@hd_kumaraswamy) January 21, 2021

ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ಜಜ ತೆರವಿಗಾಗಿ ಎಂಇಎಸ್, ಶಿವಸೇನೆ ಇಷ್ಟು ಕುತಂತ್ರ ಮಾಡುತ್ತಿದ್ದರೂ, ಬಿಜೆಪಿ ಸರ್ಕಾರದ ಯಾವೊಬ್ಬ ಪ್ರತಿನಿಧಿಯಾಗಲಿ, ಕಾಂಗ್ರೆಸ್ನ ಯಾವ ನಾಯಕರಾಗಲಿ ಪ್ರತಿಕ್ರಿಯಿಸಿದ್ದನ್ನು ನಾನು ನೋಡಲಿಲ್ಲ. ಇದೇ ಸಲುಗೆಯಲ್ಲೇ ಉದ್ಧವ ಠಾಕ್ರೆ ಬೆಳಗಾವಿಯಂಥ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಮಾತಾಡಿದ್ದು.
— H D Kumaraswamy (@hd_kumaraswamy) January 21, 2021
3/5
ಈ ಧ್ವಜ ವಿರೋಧಿ ಹೋರಾಟವನ್ನು ರಾಜ್ಯದ ಪ್ರತಿಯೊಬ್ಬರೂ ಪಕ್ಷಾತೀತವಾಗಿ ವಿರೋಧಿಸಬೇಕಾಗಿದೆ. ಕನ್ನಡದ ವಿಚಾರಕ್ಕೆ ಮಾತಾಡಲು,ಕನ್ನಡಕ್ಕೆ ಕೈ ಎತ್ತಲು ರಾಜ್ಯದ ನಾಯಕರು ರಾಜಕೀಯ ಮರೆಯಬೇಕು. ಪಕ್ಷ ನೋಡಬಾರದು, ಮಿತ್ರಪಕ್ಷವೆಂದು ಎಣಿಸಬಾರದು, ದೆಹಲಿ ಕಡೆಗೆ ನೋಡಬಾರದು. ಆಗ ಮಾತ್ರ ಇಂಥ ಆಕ್ರಮಣಕಾರಿ ಪ್ರವೃತ್ತಿಗಳನ್ನು ನಾವು ಹತ್ತಿಕ್ಕಲು ಸಾಧ್ಯ.
— H D Kumaraswamy (@hd_kumaraswamy) January 21, 2021
4/5
ಬೆಳಗಾವಿಯಲ್ಲಿ ಇಂದು ಕನ್ನಡ ಧ್ವಜ ವಿರೋಧಿಸಿ ಎಂಇಎಸ್, ಶಿವಸೇನೆ ನಡೆಸುವ ಪ್ರತಿಭಟನೆಯನ್ನು ಸಮಾಜವಿದ್ರೋಹಿ, ದೇಶದ್ರೋಹಿ, ಘಾತಕ ಕೃತ್ಯವೆಂದು ಹೇಳಲು ಅಡ್ಡಿಯಿಲ್ಲ. ದೇಶದ ಸಾಮರಸ್ಯಕ್ಕೆ, ಭಾಷಾ ಸೌಹಾರ್ದತೆಗೆ ಈ ಹೋರಾಟ ವಿಷ ಹಿಂಡಲಿದೆ ಎಂಬುದರಲ್ಲಿ ಎರಡು ಮಾತೂ ಇಲ್ಲ. ಇದರ ಹಿಂದೆ ಮಹಾರಾಷ್ಟ್ರ ಇದೆ ಎಂಬುದಕ್ಕೆ ಸಾಕ್ಷಿಯೂ ಬೇಕಿಲ್ಲ.
— H D Kumaraswamy (@hd_kumaraswamy) January 21, 2021
5/5