ರಾಜ್ಯಸಭೆಯಲ್ಲಿ ದೇವೇಗೌಡರ ಚಿಂತನೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ರಾಜ್ಯಸಭೆ ಅಧಿವೇಶನದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ರೈತರ ಹೋರಾಟದ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಕೇಂದ್ರ ಸರ್ಕಾರಕ್ಕೆ ಒಂದಷ್ಟು ಸಲಹೆಗಳನ್ನು ನೀಡಿದ್ದರು. ಇಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ಮೋದಿ ಅವರು ದೇವೇಗೌಡರನ್ನು ಹಾಡಿ ಹೊಗಳಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರಿಗೆ ನಾನು ಆಭಾರಿಯಾಗಿದ್ದೇನೆ. ಈ ಚರ್ಚೆಗೆ ಅವರು ಗಾಂಭೀರ್ಯತೆ ನೀಡಿದ್ದಾರೆ. ರೈತರ ಆಂದೋಲನದ ಬಗ್ಗೆ ಸದನದಲ್ಲಿ ಚರ್ಚೆ ನಡೆಯಿತು. ಆದರೆ, ಹೋರಾಟ ಏಕೆ ನಡೆಯುತ್ತಿದೆ ಎಂಬುದನ್ನು ಸ್ಪಷ್ಟವಾಗಿ ಹೇಳಿಲ್ಲ. ಅವರ ಜೀವನ ರೈತರಿಗೆ ಅರ್ಪಿತವಾಗಿದೆ. ದೇವೇಗೌಡರು ಉತ್ತಮ ಸಲಹೆಗಳನ್ನು ನೀಡಿದ್ದಾರೆ. ಶೇ.86ರಷ್ಟು ರೈತರ ಬಳಿ 2 ಹೆಕ್ಟೇರ್‌ಗಿಂತ ಕಡಿಮೆ ಜಮೀನಿದೆ ಎಂದು ನರೇಂದ್ರ ಮೋದಿ ಹೆಚ್.ಡಿ. ದೇವೇಗೌಡರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಇದರ ಕುರಿತು ಟ್ವೀಟ್ ಮೂಲಕವೂ ಪ್ರಧಾನಿಗಳು ದೇವೇಗೌಡರಿಗೆ ಗೌರವ ಸೂಚಿಸಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.  

Leave a Reply