ಕಲ್ಯಾಣ ಕರ್ನಾಟಕ ಎಂದು ಹೆಸರು ಬದಲಿಸಿದ ಮಾತ್ರಕ್ಕೆ ಅಭಿವೃದ್ಧಿ ಆಗುವುದಿಲ್ಲ; ಬಿಜೆಪಿ ಸರ್ಕಾರದ ವಿರುದ್ಧ ಹೆಚ್.ಡಿ.ಕೆ ವಾಗ್ದಾಳಿ

ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಕಲಬುರ್ಗಿ ಜಿಲ್ಲೆ, ಸೇಡಂ ತಾಲ್ಲೂಕಿನಲ್ಲಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಈ ಸಮೇಷದಲ್ಲಿ ಬಾಲರಾಜ್ ಗುತ್ತೇದಾರ್ ಅವರು ಈ ಸಮಾವೇಶದಲ್ಲಿ ಭಾಗವಹಿಸಿದ ಶಾಸಕ ಬಂಡೆಪ್ಪ ಕಾಶೆಂಪುರ್, ಶಾಸಕ ನಾಗನಗೌಡ ಕಂದಕೂರ, ಜಿಲ್ಲಾ ಘಟಕದ ಅಧ್ಯಕ್ಷ ಕೇದಾರ್ ಲಿಂಗಯ್ಯ, ಇಕ್ಬಾಲ್ ಖಾನ್ ಸೇರಿದಂತೆ ಹಲವು ಜೆಡಿಎಸ್ ಮುಖಂಡರು ಹಾಗು ಸಹಸ್ರಾರು ಉತ್ಸುಕ ಕಾರ್ಯಕರ್ತರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.

ನಂತರ ಕುಮಾರಸ್ವಾಮಿ ಅವರು ಪ್ರಸ್ತುತ ರಾಜ್ಯ ಸರ್ಕಾರದ ವೈಫಲ್ಯಗಳ ಕುರಿತು, ತಮ್ಮ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಸಂಭವಿಸಿದ ಅಭಿವೃದ್ಧಿ ಕಾರ್ಯಗಳ ಕುರಿತು ಹಾಗೂ ತಮ್ಮ ಮುಂದಿನ ಯೋಜನೆಗಳ ಕುರಿತು ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.

ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಉದ್ಯೋಗ ಸೃಷ್ಟಿ, ಪ್ರವಾಹ ಪೀಡಿತರಿಗೆ ಮನೆ ಹೀಗೆ ಹಲವು ಯೋಜನೆಗಳಿಗೆ ನಿಗದಿಪಡಿಸಿ ಇಟ್ಟಿದ್ದ ಹಣವನ್ನು ಬಿಜೆಪಿ ಸರ್ಕಾರವು ರದ್ದುಗೊಳಿಸಿದೆ. ಅಲ್ಲದೆ ಕುಮಾರಸ್ವಾಮಿ ಸರ್ಕಾರದ ಸಾಧನೆಯನ್ನು ತಮ್ಮ ಸರ್ಕಾರದ ಸಾಧನೆಯೆಂದು ಬಿಂಬಿಸುತ್ತಿದೆ. ಕೇವಲ ಕಲ್ಯಾಣ ಕರ್ನಾಟಕ ಎಂದು ಹೆಸರು ಬದಲಿಸಿದ ಮಾತ್ರಕ್ಕೆ ಅಭಿವೃದ್ಧಿ ಆಗುವುದಿಲ್ಲ. ದಿನಕ್ಕೆ ಈ ಭಾಗದ ಹಲವಾರು ವಿದ್ಯಾವಂತರು ಉದ್ಯೋಗ ಕೊಡಿಸುವಂತೆ ಕೋರಿ ಬರುತ್ತಾರೆ ಎಂದು ಕುಮಾರಸ್ವಾಮಿ ಅವರು ವಾಗ್ದಾಳಿ ನೆಡೆಸಿದರು. ಹಾಗು ತಮ್ಮ ಪಂಚರತ್ನ ಯೋಜನೆಯನ್ನು ಜನರಿಗೆ ವಿವರಿಸಿ ತಮ್ಮ ಪಕ್ಷಕ್ಕೆ ಸ್ವತಂತ್ರವಾಗಿ ಸರ್ಕಾರ ರಚಿಸುವ ಅವಕಾಶ ಮಾಡಿಕೊಡುವಂತೆ ಕೋರಿದರು.

Leave a Reply